ವೀರಾಜಪೇಟೆ, ಜು. ೨೬: ಇಬ್ಬರು ಶಾಲಾ ವಿದ್ಯಾರ್ಥಿನಿಯರನ್ನು ಹಿಂಬಾಲಿಸುತ್ತಿದ್ದ ಪೊಲೀಸ್ ಪೇದೆಯ ವಿರುದ್ಧ ವೀರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವೀರಾಜಪೇಟೆ ಗ್ರಾಮಾಂತರ ಅಮ್ಮತ್ತಿ ಉಪಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ಎಂಬ ಪೇದೆ ಅಮ್ಮತ್ತಿ ಒಂಟಿಯAಗಡಿಯ ಇಬ್ಬರು ಶಾಲಾ ವಿದ್ಯಾರ್ಥಿನಿಯರನ್ನು ಕಳೆದ ಮೂರು ದಿನಗಳಿಂದ ಹಿಂಬಾಲಿಸುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತನನ್ನು ನಿನ್ನೆದಿನ ಅಮ್ಮತ್ತಿ ರಿಕ್ರಿಯೇಷನ್ ಕ್ಲಬ್‌ನಲ್ಲಿ ದಿಗ್ಭಂಧನಕ್ಕೆ ಒಳಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ್ದ ವೃತ್ತ ನಿರೀಕ್ಷಕ ಶಿವರುದ್ರಪ್ಪ ಅವರು ವಿದ್ಯಾರ್ಥಿನಿಯರ ಪೋಷಕರಿಂದ ದೂರು ಸ್ವೀಕರಿಸಿದ್ದು, ಇಂದು ಚಂದ್ರಶೇಖರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.