ಸುಳ್ಯ, ಜು. ೨೭: ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದಿದ್ದ ಬಿಜೆಪಿಯ ಯುವ ಮುಖಂಡ, ಕೋಳಿ ಅಂಗಡಿ ವ್ಯಾಪಾರಿ ಪ್ರವೀಣ್ ನೆಟ್ಟಾರು (೩೨) ಹತ್ಯೆಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾರಿಗೆ ಮುತ್ತಿಗೆ ಹಾಕುವುದರೊಂದಿಗೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡುವದರೊಂದಿಗೆ ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ನಿನ್ನೆ ರಾತ್ರಿ ಸುಮಾರು ೯ ಗಂಟೆ ವೇಳೆಗೆ ಬೆಳ್ಳಾರೆಯಲ್ಲಿದ್ದ ತನ್ನ ಕೋಳಿ ಮಾಂಸದ ಅಂಗಡಿಯನ್ನು ಮುಚ್ಚಿ ಬೈಕ್ನಲ್ಲಿ ತೆರಳುವ ಸಂದರ್ಭ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ತಲವಾರ್ನಿಂದ ಧಾಳಿ ಮಾಡಿ ಪರಾರಿಯಾಗಿದ್ದರು. ಗಂಭೀರ ಗಾಯಗೊಂಡ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದರು. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಇಂದು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆಗೆ ಮುಂದಾದರು. ನ್ಯಾಯಕ್ಕಾಗಿ ಆಗ್ರಹಿಸುತ್ತ, ಸರಕಾರ ವಿರುದ್ಧ ಧಿಕ್ಕಾರ ಕೂಗುತ್ತಾ ಆಕ್ರೋಶ ಹೊರಹಾಕಿದರು.
ಈ ವೇಳೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರ ಕಾರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಕಾರನ್ನು ಮಗುಚಿ ಹಾಕಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಗುಂಪನ್ನು ಚದುರಿಸಲು ಮುಂದಾದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ನಳೀನ್ಕುಮಾರ್ ಕಟೀಲ್ ಅವರ ಕಾರಿನ ಟಯರ್ ಪಂಕ್ಚರ್ ಮಾಡಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ನಡುವೆ ಕಲ್ಲು ತೂರಾಟ ನಡೆದ ಕಾರಣ ಪೊಲೀಸರು ಲಾಠಿಚಾರ್ಜ್ ಮಾಡಿದರು. ಹಲವು ಕಾರ್ಯಕರ್ತರು ಗಾಯಗೊಂಡರು.
ಸಚಿವ ಸುನಿಲ್ಕುಮಾರ್, ಸಚಿವ ಅಂಗಾರ ಅವರುಗಳನ್ನು ಕೂಡ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧವು ಆಕ್ರೋಶ ವ್ಯಕ್ತಪಡಿಸಿದರು. ಬೆಳ್ಳಾರೆ ಹಾಗೂ ನೆಟ್ಟಾರುವಿನಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದ್ದು, ಪರಿಸ್ಥಿತಿ ಬೂದಿಮುಚ್ಚಿದ ಕೆಂಡದAತಿದೆ.
ಸಿಎA ಸಭೆ
ಬೆಳ್ಳಾರೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುತ್ತಿದ್ದಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೃಹ ಸಚಿವರು ಹಾಗೂ ಪೊಲೀಸ್ ಉನ್ನತ ಅಧಿಕಾರಿಗಳನ್ನು ಒಳಗೊಂಡು ಸಭೆ ನಡೆಸಿ, ಆರೋಪಿಗಳ ಪತ್ತೆ ಸಂಬAಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ಐದು ತಂಡಗಳ ರಚನೆ
ಪ್ರವೀಣ್ ನೆಟ್ಟಾರು ಹಂತಕರ ಪತ್ತೆಗೆ ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಐದು ತಂಡಗಳ ಪೈಕಿ ಮೂರು ತಂಡಗಳನ್ನು ಕ್ರಮವಾಗಿ ಕೇರಳ, ಮಡಿಕೇರಿ, ಹಾಸನಕ್ಕೆ ಕಳುಹಿಸಲಾಗಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣ ಸಂಬAಧ ಬಿಜೆಪಿ ಸರಕಾರದ ವಿರುದ್ಧ ಹಿಂದೂಪರ ಸಂಘಟನೆಗಳು ತೀವ್ರ ಅಸಮಾಧಾನಗೊಂಡಿವೆ. ಹಿಂದೂ ಕಾರ್ಯಕರ್ತರ ಹತ್ಯೆ ಸಂಬAಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಲ್ಲಿ ಸರಕಾರ ವಿಫಲವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ. ಹಿಂದೂಪರ ಸಂಘಟನೆಗಳ ಹಲವು ಮುಖಂಡರುಗಳು ಬಿಜೆಪಿ ವಿರುದ್ಧ ಅಸಮಾಧಾನಗೊಂಡು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ರಾಜ್ಯದ ಹಲವೆಡೆ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಖಂಡನೆ
ಮಡಿಕೇರಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಟಿ.ಈ.ಸುರೇಶ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಬೆಳ್ಳಾರೆ ಘಟನೆಯ ನೈತಿಕ ಹೊಣೆ ಹೊರಬೇಕು ಮತ್ತು ಪ್ರವೀಣ್ ಹತ್ಯೆ ಮಾಡಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕಠಿಣ ಕ್ರಮಕ್ಕೆ ಆಗ್ರಹ
ಸೋಮವಾರಪೇಟೆ: ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳನ್ನು ಕೂಡಲೇ ಬಂಧಿಸುವAತೆ ಆಗ್ರಹಿಸಿ ಸೋಮವಾರಪೇಟೆ ತಾಲೂಕು ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ತಾಲೂಕು ತಹಶೀಲ್ದಾರ್ ಗೋವಿಂದರಾಜು ಹಾಗೂ ಶಾಸಕರ ಆಪ್ತ ಸಹಾಯಕ ಆರ್.ಡಿ. ರವಿ ಅವರ ಮೂಲಕ ಪ್ರತ್ಯೇಕ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.
ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಎಚ್.ಕೆ.ಚಂದ್ರಶೇಖರ್, ಉಪಾಧ್ಯಕ್ಷ ನತೀಶ್ ಮಂದಣ್ಣ, ಕಾರ್ಯದರ್ಶಿ ಕೆ.ಜಿ.ಸುರೇಶ್, ಭಜರಂಗದಳ ತಾಲೂಕು ಸಂಚಾಲಕ ಜೀವನ್ ನೇಗಳ್ಳೆ, ಪ್ರಚಾರ ಪ್ರಮುಖ್ ಪ್ರದೀಪ್, ಮಾಜಿ ಸಂಚಾಲಕ ಮಧು ಕಿಬ್ಬೆಟ್ಟ, ಮಂಜುನಾಥ್, ಅಭಿಷೇಕ್, ಗಂಧರ್ವ, ಶ್ಯಾಮ್, ಹೃತಿಕ್, ಸ್ಪಂದನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರವೀಂದ್ರ ರಾಜೀನಾಮೆ
ಮಡಿಕೇರಿ : ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬAಧಿಸಿದAತೆ ಜಿಲ್ಲಾ ಬಿಜೆಪಿಯ ಖಾಯಂ ಆಹ್ವಾನಿತರಾಗಿರುವ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮಾಚಿಮಾಡ ಎಂ. ರವೀಂದ್ರ ಅವರು ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ ಖಂಡನೀಯವಾಗಿದ್ದು, ಇದನ್ನು ಸಮರ್ಥವಾಗಿ ನಿಭಾಯಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ಗುಡ್ಡೆಹೊಸೂರು: ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಗುಡ್ಡೆಹೊಸೂರಿನಲ್ಲಿ ಹಿಂದೂಪರ ಸಂಘಟನೆ ಮತ್ತು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.
ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ ಕುಡೆಕ್ಕಲ್ ನಿತ್ಯ, ಸಹಪ್ರಮುಖ ರಾದ ಪ್ರವೀಣ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪುಷ್ಪ ನಾಗೇಶ್, ಎ.ಬಿ.ವಿ.ಪಿ.ಯ ಪ್ರಾಂತ್ಯ ಸಂಘಟನಾ ಕಾರ್ಯದರ್ಶಿ ಟಿ.ಎಸ್.ಜಯಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರದೀಪ್, ಮಂಡೇಪAಡ ಮಾದಪ್ಪ, ಜಿ.ಎಂ. ಸಲಿ, ಜಿ.ಎಂ. ವಿಶುಕುಮಾರ್, ಬಿ.ಎಸ್. ಧನಪಾಲ್, ಅಭಿಷೇಕ್ (ಅಭಿ) ಮಹೇಶ್ ಮುಂತಾದವರು ಹಾಜರಿದ್ದರು.