ಯುವಕ ಆಸ್ಪತ್ರೆ ದಾಖಲು
ಕರಿಕೆ, ಜು. ೨೭ : ಇಲ್ಲಿಗೆ ಸಮೀಪದ ಚೆತ್ತುಕಾಯದ ಬರೂಕ ಜಲವಿದ್ಯುತ್ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕನೋರ್ವ ಗಾಯಗೊಂಡ ಘಟನೆ ವರದಿಯಾಗಿದೆ.ಬರೂಕ ಪವರ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ಕಚೇರಿ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳೀಯನಾದ ಗಂಗಾಧರ ಎಂಬ ಯುವಕ ವಿದ್ಯುತ್ ಸಬ್ ಸ್ಟೇಷನ್ ನಿರ್ವಹಣೆ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಕಾಲಿನ ಪಾದ ಹಾಗೂ ಕೈ ಸುಟ್ಟು ಹೋಗಿ ಗಂಭೀರ ಗಾಯಗೊಂಡು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ.