ಮಡಿಕೇರಿ, ಜು.೨೮: ಸ್ವಾತಂತ್ರö್ಯದ ಅಮೃತ ಮಹೋತ್ಸವ ಪ್ರಯುಕ್ತ ‘ಉಜ್ವಲ ಭಾರತ, ಉಜ್ವಲ ಭವಿಷ್ಯ’ ಕಾರ್ಯಕ್ರಮವು ತಾ. ೨೯ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ಸಿಂಹ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.