ಮಡಿಕೇರಿ, ಜು. ೨೮: ಜಿಲ್ಲೆಯಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಕೈ, ಕಾಲು, ಬಾಯಿ ಜ್ವರ ತಡೆಗೆ ಸೂಕ್ತ ಕ್ರಮವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ ಭರವಸೆ ನೀಡಿದರು.

ತಾ. ೨೮ ರಂದು ಶಕ್ತಿ ದಿನಪತ್ರಿಕೆಯಲ್ಲಿ ‘ಮಕ್ಕಳಲ್ಲಿ ಬಾಧಿಸುತ್ತಿದೆ ಕೈ,ಕಾಲು, ಬಾಯಿ ಜ್ವರ’ ಎಂಬ ವರದಿಯನ್ನು ಗಮನಿಸಿದ ಅಧಿಕಾರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಶಾಲೆಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ. ಜಿಲ್ಲೆಯ ಎಲ್ಲಾ ಮಕ್ಕಳ ತಜ್ಞರನ್ನು ಸಂಪರ್ಕಿಸಿ ಬಾಧಿತ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕಿ ಈ ರೀತಿ ಪ್ರಕರಣ ಕಂಡುಬAದಲ್ಲಿ ಇಲಾಖೆಗೆ ತಿಳಿಸುವಂತೆ ಸೂಚಿಸಲಾಗಿದೆ. ಇದುವರೆಗೂ ಇಲಾಖೆಗೆ ಈ ಬಗ್ಗೆ ಮಾಹಿತಿ ಲಭ್ಯವಾಗಿರಲಿಲ್ಲ. ರೋಗ ವ್ಯಾಪಿಸದಂತೆ ಎಚ್ಚರಿಕೆ ವಹಿಸಲಾಗುವುದು. ವಿಶೇಷ ಘಟಕ ತೆರೆಯಲು ಮುಂದಾಗಲಾಗುವುದು ಎಂದು ತಿಳಿಸಿದರು.

‘ಮಂಕಿಪಾಕ್ಸ್’ ಆತಂಕ ಹಿನ್ನೆಲೆ ಕೇರಳ-ಕೊಡಗು ಗಡಿಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತದೆ. ಕರಿಕೆಯಲ್ಲಿ ತಪಾಸಣೆ ಆರಂಭಿಸಲಾಗಿದೆ ಎಂದು ವಿವರಿಸಿದರು.