ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ
ಬೆAಗಳೂರು, ಜು. ೨೮: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ಗುರುವಾರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲೆ ಎಸ್‌ಪಿ ಋಷಿಕೇಶ್ ಸೋನಾವಣೆ, ಆರೋಪಿಗಳು ಸವಣೂರು ಗ್ರಾಮದ ೨೯ ವರ್ಷದ ಜಾಕೀರ್ ಮತ್ತು ಬೆಳ್ಳಾರೆ ಗ್ರಾಮದ ೨೭ ವರ್ಷದ ಮೊಹಮ್ಮದ್ ಶಫೀಕ್ ಎಂದು ತಿಳಿಸಿದ್ದಾರೆ. ಪ್ರಕರಣ ಸಂಬAಧ ಈಗಾಗಲೇ ೧೫ ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದರು. ಪ್ರಕರಣದ ತನಿಖೆಗೆ ಈಗಾಗಲೇ ತಂಡಗಳನ್ನು ರಚಿಸಲಾಗಿದ್ದು ತೀವ್ರ ತನಿಖೆ ನಡೆಸುತ್ತಿದೆ. ಕೇರಳ ಪೊಲೀಸರ ಜೊತೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು. ಪ್ರವೀಣ್ ಅವರ ಕೋಳಿ ಅಂಗಡಿ ಬಳಿಯ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿರುವ ಪೊಲೀಸರು ಅದರಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದನ್ನು ತೋರಿಸುತ್ತದೆ. ಕೊಲೆ ನಡೆಯುವ ಮುನ್ನ ಶಂಕಿತ ವ್ಯಕ್ತಿ ಸುಮಾರು ೩೦ ನಿಮಿಷಗಳ ಕಾಲ ಬೈಕ್‌ನಲ್ಲಿ ರಸ್ತೆಬದಿಯಲ್ಲಿ ಕಾದು ಕೋಳಿ ಅಂಗಡಿಯತ್ತ ಹೋಗುತ್ತಿರುವ ದೃಶ್ಯಗಳು ದಾಖಲಾಗಿವೆ.
ಶಿಕ್ಷಕರ ನೇಮಕಾತಿ ಹಗರಣ: ಬಂಧಿತ ಪಾರ್ಥ ಚಟರ್ಜಿ ವಜಾ
ಕೋಲ್ಕತ್ತಾ, ಜು. ೨೮: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳ ಕೈಗಾರಿಕೆ ಸಚಿವ ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಸಂಪುಟದಿAದ ವಜಾಗೊಳಿಸಿದ್ದಾರೆ. ಇಂದು ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೂ ಮುನ್ನ ಪಾರ್ಥ ಚಟರ್ಜಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಹಾಗೂ ಇತರ ನಾಯಕರು ಒತ್ತಾಯಿಸಿದ್ದರು. ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿಯವರೊಂದಿಗೆ ನಂಟು ಹೊಂದಿರುವ ಅಪಾರ್ಟ್ ಮೆಂಟ್‌ಗಳಿAದ ಸುಮಾರು ೫೦ ಕೋಟಿ ರೂಪಾಯಿ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಆಸ್ತಿ ಮತ್ತು ವಿದೇಶಿ ವಿನಿಮಯದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಪಾರ್ಥ ಚಟರ್ಜಿ ಅವರನ್ನು ಸಚಿವ ಸಂಪುಟ ದಿಂದ ಮತ್ತು ಪಕ್ಷದ ಎಲ್ಲಾ ಹುದ್ದೆಗಳಿಂದ ತಕ್ಷಣವೇ ವಜಾಗೊಳಿಸಬೇಕು. ಅವರನ್ನು ಉಚ್ಚಾಟಿಸಬೇಕು. ನನ್ನ ಈ ಹೇಳಿಕೆಯು ತಪ್ಪೆಂದು ಪರಿಗಣಿಸಿದರೆ, ನನ್ನನ್ನು ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲು ಪಕ್ಷಕ್ಕೆ ಎಲ್ಲ ಅಧಿಕಾರ ಇದೆ. ನಾನು ಟಿಎಂಸಿಯ ಸೈನಿಕನಾಗಿ ಮುಂದುವರಿಯುತ್ತೇನೆ ಎಂದು ಪಕ್ಷದ ವಕ್ತಾರರೂ ಆಗಿರುವ ಘೋಷ್ ಟ್ವೀಟ್ ಮಾಡಿದ್ದರು.
ಬೊಮ್ಮಾಯಿ ಸರ್ಕಾರಕ್ಕೆ ೧ ವರ್ಷ: ಹೊಸ ಯೋಜನೆಗಳ ಲೋಕಾರ್ಪಣೆ
ಬೆಂಗಳೂರು, ಜು. ೨೮: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ಹಲವು ನೂತನ ಯೋಜನೆಗಳನ್ನು ಗುರುವಾರ ಲೋಕಾರ್ಪಣೆ ಮಾಡಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಇಂದು ಏರ್ಪಡಿಸಿದ್ದ ಒಂದು ವರ್ಷದ ಸಾಧನೆಯ ಮಾಹಿತಿ ನೀಡುವ ಸಮಾರಂಭವನ್ನು ರದ್ದುಪಡಿಸಲಾಗಿದೆ. ಆದರೆ ಸಾರ್ವಜನಿಕರಿಗೆ ಈವರೆಗೆ ಕೈಗೊಂಡ ಅಭಿವೃದ್ಧಿ ಯೋಜನೆಗಳ ಮಾಹಿತಿ ನೀಡುವುದು ಹಾಗೂ ಮುಂದೆ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಯೋಜನೆಗಳ ಮಾಹಿತಿ ನೀಡುವ ಉದ್ದೇಶದಿಂದ ಸುದ್ದಿಗೋಷ್ಠಿ ನಡೆಸುತ್ತಿರುವುದಾಗಿ ತಿಳಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಯುವಕರ ಸಬಲೀಕರಣ, ಶಿಕ್ಷಣ, ಆರೋಗ್ಯ ವಲಯದ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಲೋಕಾರ್ಪಣೆಗೊಳಿಸಿದ ನೂತನ ಯೋಜನೆಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬಗಳಿಗೆ ಉಚಿತವಾಗಿ ೭೫ ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಡಿ ಡಿಬಿಟಿ ವರ್ಗಾವಣೆ ಇಂದಿನಿAದ ಪ್ರಾರಂಭವಾಗಲಿದೆ. ಸುಮಾರು ೨೫ ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಇದಕ್ಕಾಗಿ ರೂ. ೭೦೦ ಕೋಟಿ ಒದಗಿಸಲಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ೧೦೦ ಪರಿಶಿಷ್ಟ ಜಾತಿ/ ಪಂಗಡದ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ. ಶಿಕ್ಷಣ ಹಾಗೂ ಅದರ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ‘ವಿವೇಕ’ ಯೋಜನೆಯಡಿ ಮೊದಲ ಬಾರಿಗೆ ೮೦೦೦ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ. ರಾಜ್ಯದ ೧೦೦ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣಗೊಳಿಸುವ ಯೋಜನೆಗೆ ಚಾಲನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು ೭೧ ಪಿಹೆಚ್ಸಿಗಳನ್ನು ರಾಜ್ಯದ ಸರಾಸರಿಗಿಂತ ಕಡಿಮೆ ಸೂಚ್ಯಂಕ ಇರುವ ಪ್ರದೇಶಗಳಲ್ಲಿ ಸ್ಥಾಪಿಸ ಲಾಗುವುದು. ಸ್ತಿçÃಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ ರೂ. ೧.೫೦ ಲಕ್ಷ ನೀಡುವ ಜೊತೆಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲು ಆಂಕರ್ ಬ್ಯಾಂಕ್ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ ‘ಸ್ತಿçà ಸಾಮರ್ಥ್ಯ ಯೋಜನೆ’ಗೆ ಚಾಲನೆ ನೀಡಲಾಗಿದೆ. ಸುಮಾರು ೫ ಲಕ್ಷ ಮಹಿಳೆಯರ ಸ್ವಾವಲಂಬನೆಗೆ ಎಂಡ್ ಟು ಎಂಡ್ ನೆರವು ನೀಡಲಾಗುತ್ತಿದೆ. ರಾಜ್ಯದ ಸುಮಾರು ೨೮ ಸಾವಿರ ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಿ, ಯುವಕರಿಗೂ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆ. ಇದರಿಂದ ೫ ಲಕ್ಷ ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗುವ ಅವಕಾಶ ಕಲ್ಪಿಸಲಾಗುವುದು. ಗೋವುಗಳ ಸಂರಕ್ಷಣೆಯಲ್ಲಿ ಜನರ ಪಾಲುದಾರಿಕೆಯನ್ನು ಉತ್ತೇಜಿಸಲು ಪುಣ್ಯಕೋಟಿ ದತ್ತು ಯೋಜನೆ ಜಾರಿ. ಈ ಯೋಜನೆಗೆ ಸಂಬAಧಿಸಿದ ವೆಬ್‌ಸೈಟ್‌ನ ಲೋಕಾರ್ಪಣೆ. ಪ್ರತಿಯೊಬ್ಬ ವ್ಯಕ್ತಿಯೂ ವಾರ್ಷಿಕ ೧೧೦೦೦ ರೂ. ಪಾವತಿಸಿ, ಒಂದು ಗೋವಿನ ಒಂದು ವರ್ಷದ ನಿರ್ವಹಣೆಯನ್ನು ಮಾಡಬಹುದಾಗಿದೆ. ಅವರೇ ಗೋವುಗಳನ್ನು ದತ್ತು ತೆಗೆದುಕೊಳ್ಳಬಹುದು, ಅಥವಾ ೧೧,೦೦೦ ಮೊತ್ತ ಪಾವತಿಸಿದ್ದಲ್ಲಿ ಸರ್ಕಾರದ ಗೋ ಶಾಲೆಗಳಲ್ಲಿ ಗೋವುಗಳ ರಕ್ಷಣೆಗೆ ಈ ಮೊತ್ತವನ್ನು ಬಳಸಿಕೊಳ್ಳಲಾಗುವುದು. ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ೧೦-೧೨ ಸಾವಿರ ಮಕ್ಕಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಈ ಎಲ್ಲ ವಿದ್ಯಾನಿಧಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ದೇಶದಲ್ಲಿಯೇ ಮೊದಲ ಬಾರಿಗೆ ಪ್ರಾರಂಭಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ರೈತ ವಿದ್ಯಾನಿಧಿಯಿಂದ ಕಳೆದ ವರ್ಷ ೮.೫೦ ಲಕ್ಷ ಹಾಗೂ ಈ ವರ್ಷ ೯.೮ ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.
‘ರಾಷ್ಟçಪತ್ನಿ' ವಿವಾದ: ಅಧೀರ್ ರಂಜನ್‌ಗೆ ಮಹಿಳಾ ಆಯೋಗ ನೋಟೀಸ್
ನವದೆಹಲಿ, ಜು. ೨೮: ರಾಷ್ಟçಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಗೆ ಮಹಿಳಾ ಆಯೋಗ ನೋಟೀಸ್ ನೀಡಿದ್ದು ಇದರ ಜೊತೆಗೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೋನಿಯಾ ಗಾಂಧಿಗೂ ಪತ್ರ ಬರೆಯಲಾಗಿದೆ. ಅಧೀರ್ ರಂಜನ್ ತಮ್ಮ ಹೇಳಿಕೆಗೆ ಖುದ್ದು ಹಾಜರಾಗಿ ಲಿಖಿತ ಉತ್ತರ ನೀಡುವಂತೆ ರಾಷ್ಟಿçÃಯ ಮಹಿಳಾ ಆಯೋಗ ನೋಟೀಸ್ ನೀಡಿದ್ದು ಆಗಸ್ಟ್ ೩ ರಂದು ಬೆಳಿಗ್ಗೆ ೧೧.೩೦ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ. ವಾಸ್ತವವಾಗಿ, ಅಧೀರ್ ರಂಜನ್ ಚೌಧರಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ‘ರಾಷ್ಟಿçÃಯ ಪತ್ನಿ' ಎಂದು ಕರೆದಿದ್ದರು. ಈ ಬಗ್ಗೆ ಬಿಜೆಪಿ ಕಾಂಗ್ರೆಸ್ ಮತ್ತು ಅಧೀರ್ ರಂಜನ್ ಚೌಧರಿ ಅವರನ್ನು ತೀವ್ರವಾಗಿ ಟಾರ್ಗೆಟ್ ಮಾಡುತ್ತಿದೆ. ಅಧೀರ್ ರಂಜನ್ ಚೌಧರಿ ಮಾತನಾಡಿ ಭಾರತದ ರಾಷ್ಟçಪತಿಯೇ ನಮಗೂ ರಾಷ್ಟçಪತಿ. ನನ್ನ ಬಾಯಿಂದ ಒಂದು ಮಾತು ಹೊರಬಿತ್ತು. ನಾಲಿಗೆ ಜಾರಿತು. ಆದರೆ ಬಿಜೆಪಿಯವರು ಸಾಸಿವೆಯನ್ನೇ ಬೆಟ್ಟದಷ್ಟು ಮಾಡುತ್ತಿದ್ದಾರೆ. ಮತ್ತೊಂದೆಡೆ, ಸೋನಿಯಾ ಗಾಂಧಿ ಅವರು ಅಧೀರ್ ರಂಜನ್ ಚೌಧರಿ ಈಗಾಗಲೇ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದ್ದಾರೆ.