ಮಡಿಕೇರಿ, ಜು. ೨೯: ಸರ್ಕಾರ ಜನನ ಮತ್ತು ಮರಣ ನಿಯಮ ೯ಕ್ಕೆ ತಿದ್ದುಪಡಿ ಮಾಡಿ ಹೊರಡಿಸಿದ ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿ ಮಡಿಕೇರಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ ಮಾತನಾಡಿ ಈಗ ಜನನ ಮತ್ತು ಮರಣ ಪ್ರಮಾಣ ಪತ್ರಕ್ಕೆ ಸಂಬAಧಿಸಿದ ಪ್ರಕರಣವನ್ನು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಇತ್ಯರ್ಥ ಆಗುತ್ತಿದ್ದು, ಸರ್ಕಾರದ ಆದೇಶದ ಪ್ರಕಾರ ಉಪ ವಿಭಾಗಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಇದು ಅಸಂವಿಧಾನಿಕ ಮತ್ತು ಕಾನೂನಿಗೆ ವಿರುದ್ಧವಾದ ಆದೇಶವಾಗಿದ್ದು, ಆದಷ್ಟು ಶೀಘ್ರದಲ್ಲಿ ಸರ್ಕಾರದ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ತಿದ್ದುಪಡಿ ನಿಯಮ ಜಾರಿಗೆ ಬಂದರೆ ಸಾರ್ವಜನಿಕರಿಗೆ ತುಂಬಾ ಅನ್ಯಾಯವಾಗುವುದಲ್ಲದೆ, ಕಾನೂನು ದುರುಪಯೋಗ ಆಗುವ ಸಾಧ್ಯತೆ ಇದೆ. ನಕಲಿ ಜನನ ಮತ್ತು ಮರಣ ಪತ್ರಗಳು ಸೃಷ್ಟಿಯಾಗಿ, ಸಮಾಜದಲ್ಲಿ ಅಶಾಂತಿಗೂ ಕಾರಣ ಆಗಬಹುದು ಎಂಬ ಸಂಶಯ ವ್ಯಕ್ತಪಡಿಸಿದರು. ಪ್ರಕಾರ ಉಪ ವಿಭಾಗಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಇದು ಅಸಂವಿಧಾನಿಕ ಮತ್ತು ಕಾನೂನಿಗೆ ವಿರುದ್ಧವಾದ ಆದೇಶವಾಗಿದ್ದು, ಆದಷ್ಟು ಶೀಘ್ರದಲ್ಲಿ ಸರ್ಕಾರದ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ತಿದ್ದುಪಡಿ ನಿಯಮ ಜಾರಿಗೆ ಬಂದರೆ ಸಾರ್ವಜನಿಕರಿಗೆ ತುಂಬಾ ಅನ್ಯಾಯವಾಗುವುದಲ್ಲದೆ, ಕಾನೂನು ದುರುಪಯೋಗ ಆಗುವ ಸಾಧ್ಯತೆ ಇದೆ. ನಕಲಿ ಜನನ ಮತ್ತು ಮರಣ ಪತ್ರಗಳು ಸೃಷ್ಟಿಯಾಗಿ, ಸಮಾಜದಲ್ಲಿ ಅಶಾಂತಿಗೂ ಕಾರಣ ಆಗಬಹುದು ಎಂಬ ಸಂಶಯ ವ್ಯಕ್ತಪಡಿಸಿದರು.