ಮಡಿಕೇರಿ, ಜು. ೨೮: ರಾಜ್ಯ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ ಅವರು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ಅವರ ಸುಳ್ಯ ತಾಲೂಕಿನ ಬೆಳ್ಳಾರೆ ನೆಟ್ಟೂರು ಗ್ರಾಮದಲ್ಲಿನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೃತ ಪ್ರವೀಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಕುಟುಂಬದವರೊAದಿಗೆ ಸಾಂತ್ವನದ ನುಡಿಗಳನ್ನಾಡಿದರು. ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ದೇಶದ ಸಮಸ್ತ ಬಿಜೆಪಿ ಕಾರ್ಯಕರ್ತರು ಪ್ರವೀಣ್ ಅವರ ಕುಟುಂಬದ ಜೊತೆ ನಿಲ್ಲಲಿದೆ ಎಂದು ನುಡಿದರು.

ನಂತರ ಪ್ರವೀಣ್ ಅವರ ಹತ್ಯೆ ಘಟನೆ ನಡೆದ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು ಪ್ರವೀಣ್ ಅವರ ಸ್ನೇಹಿತರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಘಟನೆಯ ತನಿಖಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಶೀಘ್ರವಾಗಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಪುತ್ತೂರು ಕ್ಷೇತ್ರದ ಶಾಸಕ ಸಂಜೀವ ಮಟ್ಟಂದೂರು, ವಿಜಯೇಂದ್ರ, ರಾಜೇಶ್ ನಾಯ್ಕ್, ಹರೀಶ್ ಪೂಂಜ ಇದ್ದರು.