ಭಾಗಮಂಡಲ, ಜು. ೨೮: ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಪೊಲಿಂಕಾನ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು.

ಮಳೆಯ ರೌದ್ರಾವತಾರ ಕಡಿಮೆಯಾಗಿ ಕಾವೇರಿ ಶಾಂತಗೊಳ್ಳಲಿ ಎಂಬ ಉದ್ದೇಶದಿಂದ ಅನಾದಿ ಕಾಲದಿಂದಲೂ ಈ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಮಹಾಪೂಜೆ ಬಳಿಕ ರೈತರ ಅನುಕೂಲಕ್ಕೆ ತಕ್ಕಂತೆ ಮಳೆ ಬಂದು ನಾಡಿನ ಜನತೆಗೆ ಒಳಿತಾಗ ಲೆಂದು ಪ್ರಾರ್ಥನೆಗೈದು ನಂತರ ಬಾಳೆ ದಿಂಡಿನಿAದ ಮಾಡಲಾದ ಉತ್ಸವದ ಮಂಟಪಕ್ಕೆ ದೀಪ ಬೆಳಗಿಸಲಾಯಿತು. ಅದರೊಳಗೆ ಕರಿಮಣಿ ಬಿಚ್ಚೋಲೆ ಕಾವೇರಿ ಮಾತೆಗೆ ವಸ್ತಾçಭರಣ, ಬೆಳ್ಳಿತಟ್ಟೆ, ಬೆಳ್ಳಿಯ ತೊಟ್ಟಿಲು, ಚಿನ್ನದ ಮಾಂಗಲ್ಯ ಸರವನ್ನಿಟ್ಟು ವಿಶೇಷÀ ಪೂಜೆ ಸಲ್ಲಿಸಿ ದೇವಾಲಯಕ್ಕೆ ಒಂದು ಬಾರಿ ಪ್ರದಕ್ಷಿಣೆ ಹಾಕಿ ತ್ರಿವೇಣಿ ಸಂಗಮಕ್ಕೆ ಕೊಂಡೊಯ್ದು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಕಾವೇರಿ ನದಿ ನೀರಿನಲ್ಲಿ ಬಾಳೆದಿಂಡಿನ ಮಂಟಪವನ್ನು ತೇಲಿ ಬಿಡಲಾಯಿತು.

ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಉತ್ಸವ ಆಚರಿಸಲಾಗಿತ್ತು. ಈ ವರ್ಷವೂ ಅಮವಾಸ್ಯೆ ಹಿನ್ನೆಲೆಯಲ್ಲಿ ಕೇರಳದಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ಸ್ಥಳೀಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೇವಾಲಯದ ಅರ್ಚಕರಾದ ರವಿ ಭಟ್ ಹಾಗೂ ಹರೀಶ್ ಭಟ್ ನೇತೃತ್ವದಲ್ಲಿ ಪೂಜಾ ಕಾರ್ಯಗಳು ಜರುಗಿತು. ಭಾಗಮಂಡಲ ಭಗಂಡೇಶ್ವರ ದೇವಾಲಯದ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ತಲಕಾವೇರಿ ದೇವಾಲಯದ ತಕ್ಕರಾದ ಕೋಡಿ ಮೋಟಯ್ಯ ಕಾರ್ಯ ನಿರ್ವಹಣಾಧಿ ಕಾರಿ ಕೃಷ್ಣಪ್ಪ, ಪಾರುಪತ್ತೆಗಾರ ಪೊನ್ನಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್, ಸದಸ್ಯರಾದ ಶಿರಕಜ್ಜೆ ನಾಗೇಶ್, ದಂಡಿನ ಜಯಂತ್, ಸ್ಥಳೀಯ ದೇವಾಲಯದ ತಕ್ಕರಾದ ಹೊಸಗದ್ದೆ ಭಾಸ್ಕರ, ಕುದುಪಜೆ ಪ್ರಕಾಶ್, ಇನ್ನಿತರರು ಉಪಸ್ಥಿತರಿದ್ದರು.

-ಕುಯ್ಯಮುಡಿ ಸುನಿಲ್