ಮಂಗಳೂರು, ಜು. ೨೯: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ ಕೊಲೆ ಪ್ರಕರಣ ಮಾಸುವ ಮುನ್ನವೆ ನಗರ ಹೊರವಲಯದ ಸುರತ್ಕಲ್‌ನಲ್ಲಿ ಫಾಜಿಲ್ ಮಂಗಲಪೇಟೆ (೨೩) ಹತ್ಯೆ ಎಂಬ ಯುವಕನ ಹತ್ಯೆಯಾಗಿದೆ. ಫಾಜಿಲ್ ಹತ್ಯೆಯ ನಂತರ ಅನುಮಾನಾಸ್ಪದವಾಗಿ ಕಂಡುಬAದ ೧೨ ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು. ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸಿದ ೧೪ ಜನರನ್ನು ವಶಕ್ಕೆ ಪಡೆದಿದ್ದೇವೆ. ಫಾಜಿಲ್ ಹತ್ಯೆ ಪ್ರಕರಣ ಸಂಬAಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕೆಲವರನ್ನ ವಶಕ್ಕೆ ಪಡೆದಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಹೇಳಿದರು.

ನಗರದ ಖಾಸಗಿ ಆಸ್ಪತ್ರೆಯಿಂದ ಸುರತ್ಕಲ್ ಮಂಗಳಪೇಟೆವರೆಗೆ ಮೆರವಣಿಗೆ ಮೂಲಕ ಫಾಝಿಲ್ ಮೃತ ದೇಹ ತರಲಾಗಿದ್ದು, ಫಾಝಿಲ್ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕರು ಜಮಾಯಿಸಿದ್ದರು. ಪುರುಷರಿಗೆ ಅಂತಿಮ ದರ್ಶನಕ್ಕೆ ಮಂಗಳಪೇಟೆ ಮೊಹಿದ್ದೀನ್ ಜುಮಾ ಮಸೀದಿಯಲ್ಲಿ ಅವಕಾಶ ಮಾಡಲಾಗಿತ್ತು. ಮಸೀದಿಯಲ್ಲಿ ಫಾಜಿಲ್ ಪಾರ್ಥಿವ ಶರೀರಕ್ಕೆ ಪ್ರಾರ್ಥನೆ ಸಲ್ಲಿಕೆ ಬಳಿಕ ಮಸೀದಿಯ ಕಬರ್ ಸ್ಥಾನದಲ್ಲಿ ದಫನ್ ಕಾರ್ಯ ನಡೆಯಿತು. ಫಾಝಿಲ್ ಅಂತಿಮ ದರ್ಶನದಲ್ಲಿ ಐವನ್ ಡಿಸೋಜ, ಮೋಹಿದ್ದೀನ್ ಮಾಜಿ ಶಾಸಕರು ಭಾಗಿಯಾಗಿದ್ದರು.

ನಿನ್ನೆ ರಾತ್ರಿ ಕಾರಿನಲ್ಲಿ ಬಂದ ನಾಲ್ವರು ಮುಸುಕುದಾರಿಗಳು ಬಟ್ಟೆ ಅಂಗಡಿಯ ಹೊರಗಿದ್ದ ಫಾಝಿಲ್‌ನನ್ನು ತಲವಾರುಗಳಿಂದ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಫಾಝಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಕಾಟಿಪಳ್ಳ ಮಂಗಲಪೇಟೆ ನಿವಾಸಿ ಮಹಮ್ಮದ್ ಫಾಝಿಲ್ ರಾತ್ರಿ ಸುರತ್ಕಲ್ ಮಾರುಕಟ್ಟೆ ಸಮೀಪ ಬಟ್ಟೆ ಅಂಗಡಿಗೆ ಹೋಗುತ್ತಿದ್ದಾಗ ಮಾರಕಾಸ್ತ್ರಗಳಿಂದ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದರು. ಪ್ರವೀಣ್ ನೆಟ್ಟಾರು ಹತ್ಯೆಯಿಂದ ಪ್ರಕ್ಷುಬ್ಧವಾಗಿದ್ದ ಕರಾವಳಿಗೆ ಈ ಘಟನೆ ಸಾಕಷ್ಟು ಆತಂಕ ತಂದಿತ್ತು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತಿಕಾರವಾಗಿ ಫಾಝಿಲ್ ಹತ್ಯೆ ಮಾಡಲಾಗಿದೆ ಎಂದು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಆರೋಪಿಸಿದ್ದಾರೆ. ಆದರೆ, ಈ ಘಟನೆಗೆ ಬೇರೆ ಕಾರಣಗಳಿವೆ ಎಂದು ಹೇಳಲಾಗುತ್ತಿದೆ. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದು, ಸದ್ಯದಲ್ಲಿಯೇ ವಿವರ ಹೊರಬೀಳುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿದ್ದಾಗಲೇ ಈ ಕೊಲೆ ನಡೆದಿದೆ. ಮುಖ್ಯಮಂತ್ರಿಗಳು ನಿನ್ನೆ ಸಂಜೆ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು.

ನಿಷೇಧಾಜ್ಞೆ ಜಾರಿ

ಮಂಗಳೂರಿನಲ್ಲಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಜಿಲ್ಲಾಡಳಿತ ಶನಿವಾರ ಶಾಂತಿ ಸಭೆ ಆಯೋಜಿಸಿದೆ ಮತ್ತು ಜಿಲ್ಲೆಯಲ್ಲಿ ಆಗಸ್ಟ್ ೧ ರವರೆಗೆ ಸಂಜೆ ೬ ರಿಂದ ಬೆಳಿಗ್ಗೆ ೬ ಗಂಟೆಯವರೆಗೆ ಬಂದ್ ಮಾಡಲು ಆದೇಶಿಸಿದೆ. ಗುಪ್ತಚರ ಇಲಾಖೆಯ ಮಾಹಿತಿ ಪ್ರಕಾರ ಮುಂದಿನ ಮೂರು ದಿನ ಕಠಿಣ ಪರಿಸ್ಥಿತಿ ಇದೆ. ಹೀಗಾಗಿ ಆಗಸ್ಟ್ ೧ ರವರೆಗೆ ಸಂಜೆ ೬ ಗಂಟೆಯಿAದ ಬೆಳಿಗ್ಗೆ ೬ ಗಂಟೆ ತನಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತದೆ. ನಗರ ವ್ಯಾಪ್ತಿಗೂ ಬಂದ್ ಆದೇಶ ಅನ್ವಯವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ. ಇದು ನೈಟ್ ಕರ್ಫ್ಯೂ ಅಲ್ಲ, ಬದಲಾಗಿ ಜನ ಕಡಿಮೆ ಮಾಡಿ ಪೊಲೀಸರಿಗೆ ಶಾಂತಿ ಸುವ್ಯವಸ್ಥಿತೆ ಕಾಪಾಡುವ ಉದ್ದೇಶವಾಗಿದೆ. ಅಗತ್ಯ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ ಸಿನಿಮಾ ಶೋ ಬಂದ್ ಮಾಡಲು ಸೂಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕ ಸಭೆ ಸಮಾರಂಭ ಮಾಡುವಂತೆ ಇಲ್ಲ ಎಂದು ಆಯೋಜಕರಿಗೆ ಸೂಚನೆ ನೀಡಲಾಗಿದೆ. ರಾತ್ರಿ ಅಗತ್ಯ ಪ್ರಯಾಣ ಮಾಡುವವರು ಟಿಕೆಟ್‌ಗಳನ್ನು ತೋರಿಸಿ ಪ್ರಯಾಣ ಮಾಡಬಹುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ತಾ.೩೦ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ನಡೆಸಲಾಗುತ್ತಿದೆ. ಪೊಲೀಸ್ ಹಿರಿಯ ಅಧಿಕಾರಿಗಳು, ವಿವಿಧ ಧರ್ಮಗಳ ಮುಖಂಡರು ಹಾಗೂ ರಾಜಕೀಯ ಪಕ್ಷದ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಲಹೆ ಸೂಚನೆಗಳನ್ನು ಎಲ್ಲರಿಂದ ಪಡೆಯಲಾಗುತ್ತದೆ. ಜಿಲ್ಲಾಡಳಿತದ ಮುಂದಿನ ನಿಯಮ, ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.