ಮಡಿಕೇರಿ, ಜು. ೩೦: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ಹಾಗೂ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಪ್ರತಿಭಾನ್ವಿತ ಅರ್ಹ ಕ್ರೀಡಾಪಟುಗಳು ೨೦೨೧ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು, ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಈ ಕಚೇರಿಯಿಂದ ಪಡೆದು ಆಗಸ್ಟ್ ೫ ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೮೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.