ಕರಿಕೆ, ಜು. ೩೦: ಗಡಿ ಗ್ರಾಮ ಕರಿಕೆ ಚೆಕ್‌ಪೋಸ್ಟ್ನಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಈ ಬಗ್ಗೆ ‘ಶಕ್ತಿ’ಗೆ ಪ್ರತಿಕ್ರಿಯೆ ನೀಡಿದ ಭಾಗಮಂಡಲ ಆರಕ್ಷಕ ಉಪ ನಿರೀಕ್ಷಕಿ ಪ್ರಿಯಾಂಕ ನೆರೆಯ ದ.ಕ. ಜಿಲ್ಲೆಯಲ್ಲಿ ನಿಷೇಧಾಜ್ಞೆ ಹಿನ್ನೆಲೆ, ಕೇರಳ ಗಡಿ ಚೆಕ್‌ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸರಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕೊಡಗು ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಅನ್ವಯ ಕರಿಕೆ ಚೆಕ್‌ಪೋಸ್ಟ್ನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
-ಸುಧೀರ್