ವೀರಾಜಪೇಟೆ, ಜು. ೩೦ ಸರ್ಕಾರ ಹಾಗೂ ನ್ಯಾಯಾಲಯದ ಆದೇಶದಂತೆ ರಾತ್ರಿ ೧೦ ಗಂಟೆಯ ನಂತರ ಯಾವುದೇ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ವೀರಾಜಪೇಟೆ ಡಿವೈಎಸ್‌ಪಿ ನಿರಂಜನರಾಜ್ ಅರಸ್ ಹೇಳಿದರು.
ಐತಿಹಾಸಿಕ ನಾಡಹಬ್ಬ ಗೌರಿ ಗಣೇಶೋತ್ಸವವನ್ನು ವಿಜೃಂಭಣೆ ಯಿಂದ ಆಚರಣೆ ಮಾಡುವ ನಿಟ್ಟಿನಲ್ಲಿ ಗೌರಿ ನಾಡಹಬ್ಬ ಸಮಿತಿ ಒಕ್ಕೂಟದ ಅಧ್ಯಕ್ಷ ಬಿ.ಜೆ. ಸಾಯಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ಪುರಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ರಾತ್ರಿ ೧೦ ಗಂಟೆಯ ನಂತರ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ಯಾವುದೇ ಸಂಗೀತ, ವಾದ್ಯ, ಚಂಡೆ ಮದ್ದಳೆಗಳನ್ನು ಬಳಸ ಬಾರದು. ಸರ್ಕಾರದ ಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯ. ನಾಡಹಬ್ಬ ಸಮಿತಿ ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೋರಿದರು.
ಪುರಸಭೆ ಮುಖ್ಯಾಧಿಕಾರಿ ಚಂದ್ರ ಕುಮಾರ್ ಮಾತನಾಡಿ ನಾಡಹಬ್ಬ ಗೌರಿ ಗಣೇಶೋತ್ಸವಕ್ಕೆ ಪುರಸಭೆ ಯಿಂದ ಸಂಪೂರ್ಣ ಸಹಕಾರ ನೀಡಲಾಗುವದು. ಈಗಾಗಲೇ ಗೌರಿ ಕೆರೆಯನ್ನು ಅಭಿವೃದ್ಧಿಪಡಿಸಿ ವಿಸರ್ಜನೆಗೆ ತೆಪ್ಪದ ವ್ಯವಸ್ಥೆ ಮಾಡಲಾ ಗಿದೆ. ಪುರಸಭೆ ವ್ಯಾಪ್ತಿಯಲ್ಲಿನ ಬಹುತೇಕ ರಸ್ತೆಗಳನ್ನು ಕಾಂಕ್ರಿಟ್ ರಸ್ತೆ ಮಾಡಲು ಟೆಂಡರ್ ಪ್ರಕ್ರಿಯೆ ನಡೆದಿದೆ. ಮಂಟಪಗಳು ತೆರಳುವ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಗುಂಡಿ ಮುಚ್ಚಿಸಲಾಗು ವುದು. ಉತ್ಸವ ಸಮಿತಿಗಳು ಅಲ್ಲಲ್ಲಿ ಬ್ಯಾನರ್ ಬಂಟಿAಗ್ಸ್ಗಳನ್ನು ಕಟ್ಟುವ ಸಮಿತಿಗಳು ಹಬ್ಬದ ನಂತರ ಅದನ್ನು ತೆರವುಗೊಳಿಸಬೇಕು. ಪಟ್ಟಣವನ್ನು ಶುಚಿಯಾಗಿಡಲು ಸಹಕರಿಸಬೇಕು ಎಂದು ಹೇಳಿದರು.
ಸಮಿತಿ ಅಧ್ಯಕ್ಷ ಸಾಯಿನಾಥ್ ನಾಯಕ್ ಮಾತನಾಡಿ ಕಳೆದ ೪ ವರ್ಷದಿಂದ ಪಕೃತಿ ವಿಕೋಪ ಹಾಗೂ ಕೊರೊನಾದಿಂದಾಗಿ ಗೌರಿಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಪೊಲೀಸ್, ಲೋಕೋಪಯೋಗಿ, ಪುರಸಭೆ, ಚೆಸ್ಕಾಂ, ಆರೋಗ್ಯ ಮತ್ತು ಕಂದಾಯ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದರು.
ಸಭೆಯಲ್ಲಿ ಕಂದಾಯ, ಚೆಸ್ಕಾಂ, ಆರೋಗ್ಯ, ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ೨೧ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು. ವೇದಿಕೆಯಲ್ಲಿ ಗೌರಿ ನಾಡಹಬ್ಬ ಸಮಿತಿ ಉಪಾಧ್ಯಕ್ಷ ಸನ್ನಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವಿನಾಂಕ್ ಕುಟ್ಟಪ್ಪ, ವೃತ್ತ ನಿರೀಕ್ಷಕ ಶಿವರುದ್ರಪ್ಪ, ಸಬ್ ಇನ್ಸ್ಪೆಕ್ಟರ್ ಶ್ರೀಧರ್, ರವಿಕುಮಾರ್, ಲೋಕೋಪಯೋಗಿ ಸಹಾಯಕ ಅಭಿಯಂತರ ರಾಮಣ್ಣಗೌಡ ಮತ್ತಿತರರು ಉಪಸ್ಥಿತರಿದ್ದರು.