ಸೋಮವಾರಪೇಟೆ, ಜು. ೨೯: ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ರಾಷ್ಟçಕವಿ ಕುವೆಂಪು ಪ್ರತಿಷ್ಠಾನ, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿವಮೊಗ್ಗ, ಕೊಡಗು ಕಸಾಪ ಪದಾಧಿಕಾರಿಗಳಿಗೆ ಎರಡು ದಿನಗಳ ಕಾಲ ಆತ್ಮಾವಲೋಕನ “ಮುಂಗಾರು ಸಂಸ್ಕೃತಿ ಚಿಂತನಾ ಶಿಬಿರ” ಕುಪ್ಪಳ್ಳಿಯ ಕುವೆಂಪು ಶತಮಾನೋತ್ಸವ ಭವನದಲ್ಲಿ ನಡೆಯಿತು.

ಸಾಹಿತಿ ಎಲ್.ಎನ್. ಮುಕುಂದರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ೨೦ನೇ ಶತಮಾನದ ಆರಂಭದ ಕಾಲದಲ್ಲಿ ಬಿಎಂಶ್ರೀ ಹಾಕಿಕೊಟ್ಟ ದಾರಿಯಲ್ಲಿ ಶಿಷ್ಯರು ನಡೆದ ಕಾರಣ ನವೋದಯ, ನವ್ಯ, ಪ್ರಗತಿಶೀಲ, ಬಂಡಾಯ ಸಾಹಿತ್ಯಗಳ ಮೂಲಕ ಹೊಸ ಸಾಹಿತ್ಯ ಪುಟ ಆರಂಭವಾಯಿತು ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್, ರಾಷ್ಟçಕವಿ ಕುವೆಂಪು ಪ್ರತಿಷ್ಠಾಪನದ ಖಜಾಂಚಿ ದೇವಂಗಿ ಮನುದೇವ್, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್, ಕಾರ್ಯದರ್ಶಿಗಳಾದ, ಎ.ಪಿ. ವೀರರಾಜ್, ಜ್ಯೋತಿ ಅರುಣ್, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಆಯೋಜಿಸಿದ್ದ ಶಿವಮೊಗ್ಗ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅವರನ್ನು ಸೋಮವಾರಪೇಟೆ ತಾಲೂಕು ಕಸಾಪ ವತಿಯಿಂದ ಸನ್ಮಾನಿಸಲಾಯಿತು.