ಮಡಿಕೇರಿ, ಜು. ೩೦: ಜಿಲ್ಲೆಯಲ್ಲಿ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆ, ಮಡಿಕೇರಿ ಇಲ್ಲಿ ಆಗಸ್ಟ್ ೧ ರಿಂದ ೪ ರವರೆಗೆ ನಡೆಯುವ ಅಖಿಲ ಭಾರತ ವೃತ್ತಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಆದೇಶ ಹೊರಡಿಸಿದ್ದಾರೆ.

ಹಾಗೆಯೇ ನಗರದ ಶ್ರೀನಿಕೇತನ, ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಆಗಸ್ಟ್ ೧ ರಿಂದ ಆಗಸ್ಟ್ ೩ ರವರೆಗೆ ನಡೆಯುವ ಗಣಕಯಂತ್ರ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡುವುದು, ನಕಲು ಹೊಡೆಯಲು ಸಹಾಯ ಮಾಡು ವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸು ವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಸಾಮಾಗ್ರಿ ಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವು ಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವು ದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮತ್ತಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.