*ಗೋಣಿಕೊಪ್ಪ, ಜು. ೩೧: ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ೧ ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣು, ಕಡಲೆ ಟಾಫಿಯನ್ನು ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಬಿ. ಚೇತನ್ ನೀಡಿದರು. ಸದಸ್ಯೆ ಕೊಣಿಯಂಡ ಬೋಜಮ್ಮ, ಮುಖ್ಯ ಶಿಕ್ಷಕ ಕುಮಾರ್ ಕೆ, ಕೂಡಿಗೆ ಡಯಟ್ ಶಾಲೆಯ ಉಪನ್ಯಾಸಕಿ ಗಾಯತ್ರಿ , ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

* ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ಪೌಷ್ಟಿಕ ಆಹಾರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರೀಜಾ ವೆಂಕಟೇಶ್, ಉಪಾದ್ಯಕ್ಷೆ ಬೊಟ್ಟಂಗಡ ದಶಮಿ ವಿತರಿಸಿದರು. ಪಿ.ಡಿ.ಓ. ಪುಟ್ಟರಾಜು, ಎಸ್.ಡಿ.ಎಂ.ಸಿ ಅಧ್ಯಕ್ಷ ರಘುನಾಥ ಬಿ.ಎಸ್, ಸದಸ್ಯ ಗುಣಶೇಖರ್, ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಕೋಳೆರ ದಯಾಚಂಗಪ್ಪ, ಜಿಮ್ಮಿ ಅಣ್ಣಯ್ಯ, ಮುಖ್ಯ ಶಿಕ್ಷಕ ಬಿ.ಎಂ ವಿಜಯ್ ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.