ವೀರಾಜಪೇಟೆ, ಜು. ೩೦: ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ಮಾಜಿ ರಾಷ್ಟçಪತಿ ದಿ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯ ತಿಥಿಯನ್ನು ಆಚರಿಸಲಾಯಿತು. ಈ ಸಂದರ್ಭ ಉಪನ್ಯಾಸಕಿ ರೋಹಿಣಿ ಅವರು ಅಬ್ದುಲ್ ಕಲಾಂ ಅವರ ಜೀವನ ಸಾಧನೆಗಳನ್ನು ಸವಿಸ್ತಾರವಾಗಿ ತಿಳಿಸಿದರು. ಪ್ರಾಂಶುಪಾಲೆ ದೇವಕಿ, ಉಪನ್ಯಾಸಕ ವೃಂದದವರು ಹಾಜರಿದ್ದರು.