ಭಾಗಮAಡಲ, ಜು. ೩೦: ಸ್ಮಶಾನದ ಜಾಗಕ್ಕಾಗಿ ಭಾಗಮಂಡಲ ಗ್ರಾಮ ಪಂಚಾಯಿತಿ ಕೋರಿಕೊಂಡ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯು ಸಮೀಪದ ಕೋರಂಗಾಲ ದಲ್ಲಿ ಒಂದು ಎಕರೆ ಜಾಗವನ್ನು ಗುರುತಿಸಿ ಗ್ರಾಮ ಪಂಚಾಯಿತಿಗೆ ಸ್ವಾಧೀನ ಪಡಿಸಿಕೊಳ್ಳುವಂತೆ ಅನುಮತಿ ಪತ್ರವನ್ನು ನೀಡಲಾಯಿತು.
ಜಿಲ್ಲಾಧಿಕಾರಿಗಳ ಆದೇಶದಂತೆ ಭಾಗಮಂಡಲ ಹೋಬಳಿ ಕೋರಂಗಾಲ ಗ್ರಾಮದ ಸರ್ವೆ ನಂಬರ್ ೬೩/೧ ರಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಕಾಯ್ದಿರಿಸಲಾದ ಜಾಗವನ್ನು ಭಾಗಮಂಡಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಿಗೆ, ಸದರಿ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ, ಕಂದಾಯ ಇಲಾಖೆ ಅಧಿಕಾರಿಗಳಿಂದ ಹಸ್ತಾಂತರಿಸಲಾಯಿತು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್, ದೊರೆ ಎಂ.ಎಸ್., ಉಪ ತಹಶೀಲ್ದಾರ್ ಸದಾಶಿವ ಶಿವಣ್ಣವರ, ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಾಧಿಕಾರಿ ಶರ್ಮಿಳ, ಭಾಗಮಂಡಲ ಹೋಬಳಿ ಗ್ರಾಮ ಪಂಚಾಯಿತಿ ಸದಸ್ಯರಾದ ವೀಣಾ, ಕಾಳನ ರವಿ, ದಂಡಿನ ಜಯಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದ ಪಾಲ್ಗೊಂಡಿದ್ದರು.