ಮಡಿಕೇರಿ, ಆ.೧: ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಗ್ರಾ.ಪಂ.ಮಟ್ಟದಲ್ಲಿಯೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಸಂಬAಧ ಶನಿವಾರ ಮುಳ್ಳುಸೋಗೆ ಗ್ರಾಮ ಪಂಚಾಯಿತಿ, ಮುಳ್ಳುಸೋಗೆ ಗ್ರಾಮದ ದಿನಸಿ ಅಂಗಡಿ, ಮಾಂಸ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಏಕಬಳಕೆ ಪ್ಲಾಸ್ಟಿಕ್ ಬಳಸುತ್ತಿರುವ ಬಗ್ಗೆ ಪರಿಶೀಲಿಸಲಾಯಿತು. ಈ ಸಂದರ್ಭ ಒಟ್ಟು ಅಂದಾಜು ಅರ್ಧ ಕೆಜಿ ಪ್ಲಾಸ್ಟಿಕ್ ಕವರ್ ವಶಪಡಿಸಿಕೊಳ್ಳಲಾಯಿತು ಹಾಗೂ ೧೨೦೦ ರೂ. ಗಳನ್ನು ದಂಡ ರೂಪದಲ್ಲಿ ವಸೂಲಿ ಮಾಡಿ, ಏಕಬಳಕೆಯ ನಿಷೇಧಿತ ಪ್ಲಾಸ್ಟಿಕ್ ಕವರ್ ಬಳಸದಂತೆ ತಿಳುವಳಿಕೆ ನೀಡಲಾಯಿತು.