ಕರಿಕೆ, ಆ ೧: ಇಲ್ಲಿಗೆ ಸಮೀಪದ ಪಚ್ಚೆಪಿಲಾವು ಎಂಬಲ್ಲಿ ಕಾಡಾನೆ ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆ ನಷ್ಟವಾದ ಬಗ್ಗೆ ವರದಿಯಾಗಿದೆ. ನಿವಾಸಿ ಲೋಕೇಶ್ ಎಂಬವರ ಅಡಿಕೆ ತೋಟಕ್ಕೆ ದಾಳಿ ನಡೆಸಿದ ಒಂಟಿಸಲಗವೊAದು ಅಡಿಕೆ, ಬಾಳೆ ಬೆಳೆಗಳನ್ನು ನಾಶಪಡಿಸಿವೆ. ಇದರಿಂದಾಗಿ ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ. ಈ ಭಾಗದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಆನೆ ಕಂದಕ್ಕ ನಿರ್ಮಾಣ ಮಾಡಲು ಕೂಡಲೇ ಅರಣ್ಯ ಇಲಾಖೆ ಕ್ರಮ ವಹಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.