ಭಾರತದಲ್ಲಿ ಮಂಕಿಪಾಕ್ಸ್ಗೆ ಮೊದಲ ಬಲಿ

ತಿರುವನಂತಪುರ, ಆ. ೧: ಭಾರತದಲ್ಲಿ ಮಂಕಿಪಾಕ್ಸ್ಗೆ ಮೊದಲ ಬಲಿಯಾಗಿದ್ದು, ಇತ್ತೀಚೆಗೆ ಯುಎಇಯಿಂದ ಕೇರಳಕ್ಕೆ ವಾಪಸ್ಸಾಗಿದ್ದ ವ್ಯಕ್ತಿಯೊಬ್ಬರು ಮಂಕಿಪಾಕ್ಸ್ನಿAದ ಶನಿವಾರ ಮೃತಪಟ್ಟಿರೋದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಖಚಿತಪಡಿಸಿದ್ದಾರೆ. ರೋಗಿಯು ಯುವಕನಾಗಿದ್ದು ಬೇರೆ ಯಾವುದೇ ಅನಾರೋಗ್ಯ ಅಥವಾ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರಲಿಲ್ಲ. ಮಂಕಿಪಾಕ್ಸ್ನಿAದಲೇ ಯುವಕ ಮೃತಪಟ್ಟಿದ್ದಾರೆ. ಇದರೊಂದಿಗೆ ಜಗತ್ತಿನಲ್ಲಿ ಮಂಕಿಪಾಕ್ಸ್ನಿAದ ಮೃತಪಟ್ಟವರ ಸಂಖ್ಯೆ ೪ಕ್ಕೆ ಏರಿಕೆಯಾಗಿದೆ. ಜುಲೈ ೨೨ ರಂದು ಯುಎಇಯಿಂದ ಹಿಂದಿರುಗಿದ ಯುವಕನಿಗೆ ಜುಲೈ ೨೬ ರಂದು ಜ್ವರ ಕಾಣಿಸಿಕೊಂಡಿತು. ತನ್ನ ಕುಟುಂಬದೊAದಿಗೆ ಇದ್ದ ಯುವಕ ಜುಲೈ ೨೭ ರಂದು ಆಸ್ಪತ್ರೆಗೆ ದಾಖಲಾಗಿದ್ದ. ಜುಲೈ ೨೮ ರಂದು ಅವನನ್ನು ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಯಿತು ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಜುಲೈ ೩೦ ರಂದು ನಿಧನರಾದ ಯುವಕನ ರಕ್ತದ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ ಜೀನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳಿಸಿತ್ತು. ಪರೀಕ್ಷೆಯಲ್ಲಿ ಮಂಕಿಪಾಕ್ಸ್ ದೃಢಪಟ್ಟಿದ್ದಾಗಿ ಸಚಿವರು ತಿಳಿಸಿದ್ದಾರೆ.

ಸಂಸದ ಸಂಜಯ್ ರಾವತ್ ಇ.ಡಿ. ವಶಕ್ಕೆ

ಮುಂಬೈ, ಆ. ೧: ಭೂ ಹಗರಣಕ್ಕೆ ಸಂಬAಧಿಸಿದAತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆ ಇಡಿ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು. ಆದರೆ ಮುಂಬೈ ವಿಶೇಷ ನ್ಯಾಯಾಲಯ ೪ ದಿನ ಕಸ್ಟಡಿಗೆ ನೀಡಿದೆ. ಇಡಿ ಕಸ್ಟಡಿಯಲ್ಲಿ ಸೇನಾ ನಾಯಕ ಸಂಜಯ್ ರಾವತ್‌ಗೆ ಮನೆಯಲ್ಲಿ ತಯಾರಿಸಿದ ಆಹಾರ ಮತ್ತು ಔಷಧವನ್ನು ತೆಗೆದುಕೊಳ್ಳಲು ಅನುಮತಿಸಲಾಗಿದೆ. ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆ ಮತ್ತು ವಿಚಾರಣೆಯ ಸಮಯವನ್ನು ಅಗತ್ಯವಿದ್ದಲ್ಲಿ ಸಹ ಚಿಕಿತ್ಸೆ ಬಗ್ಗೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಇದುವರೆಗಿನ ತನಿಖೆ ಮತ್ತು ಅದರಲ್ಲಿ ಕಂಡುಬAದಿರುವ ಅಂಶಗಳ ದೃಷ್ಟಿಯಿಂದ ಆರೋಪಿಗಳ ಕಸ್ಟಡಿ ಅಗತ್ಯ ಎಂಬ ತೀರ್ಮಾನಕ್ಕೆ ಬರಲಾಗಿದೆ. ಆದರೆ ೮ ದಿನಗಳ ಕಸ್ಟಡಿಗೆ ನೀಡಲು ನಾನು ಒಪ್ಪುವುದಿಲ್ಲ. ಹೀಗಾಗಿ ಆರೋಪಿಗೆ ೪ ದಿನಗಳ ಇಡಿ ಕಸ್ಟಡಿಗೆ ನೀಡಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಆಸ್ಪತ್ರೆಯಲ್ಲಿ ಅಗ್ನಿ ಅವಘಡ - ೮ ಮಂದಿ ದುರ್ಮರಣ

ಭೋಪಾಲ್, ಆ. ೧: ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಜಬಲ್‌ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯಲ್ಲಿ ಐವರು ರೋಗಿಗಳು ಮತ್ತು ಮೂವರು ಆಸ್ಪತ್ರೆ ಸಿಬ್ಬಂದಿ ಸಜೀವವಾಗಿ ಸುಟ್ಟುಹೋಗಿದ್ದಾರೆ. ಡಜನ್‌ಗೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಭಾರೀ ಬೆಂಕಿ ಅವಘಡ. ನಮ್ಮ ತಂಡಗಳು ಆಸ್ಪತ್ರೆಯಲ್ಲಿ ಸಿಲುಕಿರುವ ಎಲ್ಲಾ ಜನರನ್ನು ರಕ್ಷಿಸಿವೆ. ಬೆಂಕಿ ನಂದಿಸಲಾಗಿದೆ ಎಂದು ಜಬಲ್ ಪುರದ ಮುಖ್ಯ ಪೊಲೀಸ್ ಅಧೀಕ್ಷಕ ಅಖಿಲೇಶ್ ಗೌರ್ ಹೇಳಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

ಹಾಸನ, ಆ. ೧: ಹಾಸನದಲ್ಲಿ ರೈಲು ಹಳಿ ಮೇಲೆ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದು ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರೈಲ್ವೇ ಅಧಿಕಾರಿಗಳ ನಿರ್ಲಕ್ಷö್ಯದ ಈ ಘಟನೆ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಾಸನ ಜಿಲ್ಲೆಯ ಅಂಕಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ ೨೨ ವರ್ಷದ ವಿದ್ಯಾರ್ಥಿನಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ. ಆಕೆಯ ತಂದೆ ಪುಟ್ಟಸ್ವಾಮಿ ಆಕೆಯನ್ನು ಆಟೋದಲ್ಲಿ ಇಳಿಸಿದ ನಂತರ ಈ ದುರ್ಘಟನೆ ನಡೆದಿದೆ. ಹಳಿಗಳ ಇನ್ನೊಂದು ಬದಿಗೆ ದಾಟಲು ಪ್ರಯತ್ನಿಸುತ್ತಿದ್ದಾಗ ವಿದ್ಯಾರ್ಥಿನಿ ಜಾರಿ ಹಳಿ ಮೇಲೆ ಬಿದ್ದಿದ್ದಾಳೆ. ಈ ವೇಳೆ ಮುಂದೆ ಬರುತ್ತಿದ್ದ ರೈಲು ಅವಳಿಗೆ ಡಿಕ್ಕಿ ಹೊಡೆದಿದೆ.

ಎನ್‌ಟಿಆರ್ ಪುತ್ರಿ ಆತ್ಮಹತ್ಯೆ

ಹೈದರಾಬಾದ್, ಆ. ೧: ಆಂಧ್ರ ಪ್ರದೇಶ ಮಾಜಿ ಸಿಎಂ ಮತ್ತು ಖ್ಯಾತ ತೆಲುಗು ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಅವರ ಪುತ್ರಿ ಉಮಾ ಮಹೇಶ್ವರಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಎನ್‌ಟಿಆರ್ ಅವರ ನಾಲ್ಕನೇ ಪುತ್ರಿ ಸೋಮವಾರ ಮಧ್ಯಾಹ್ನ ಹೈದರಾಬಾದ್‌ನ ಜುಬಿಲಿ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ವಿಷಯ ತಿಳಿದ ಕೂಡಲೇ ಟಿಡಿಪಿ ಮುಖ್ಯಸ್ಥ ಹಾಗೂ ಎನ್‌ಟಿ ಆರ್ ಅವರ ಹಿರಿಯ ಅಳಿಯ ಚಂದ್ರಬಾಬು ನಾಯ್ಡು ತಮ್ಮ ಪತ್ನಿ ನಾರಾ ಭುವನೇಶ್ವರಿ ಅವರ ಜೊತೆಗೂಡಿ ಉಮಾಮಹೇಶ್ವರಿ ನಿವಾಸಕ್ಕೆ ದೌಡಾಯಿಸಿದ್ದಾರೆ. ಪ್ರಸ್ತುತ ಉಮಾ ಮಹೇಶ್ವರಿ ಅವರ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸೆಕ್ಷನ್ ೧೭೪ ಅಡಿ (ಆತ್ಮಹತ್ಯೆ) ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ.

ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಶಿಣ-ಕುಂಕುಮ, ಬಳೆ

ಬೆಂಗಳೂರು, ಆ. ೧: ಈ ಬಾರಿ ಶ್ರೀ ವರಮಹಾಲಕ್ಷಿö್ಮ ವ್ರತದಂದು ದೇವಸ್ಥಾನಗಳಲ್ಲಿ ಮಹಿಳೆಯರಿಗೆ ವಿಶೇಷ ಗೌರವ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ. ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ.

ರಾಜ್ಯದಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ

ಬೆಂಗಳೂರು, ಆ. ೧: ಇಥಿಯೋಪಿಯಾದಿಂದ ಬಂದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವ ಸುಧಾಕರ್ ಅವರು, ಇಥೋಪಿಯಾದಿಂದ ಬಂದ ವ್ಯಕ್ತಿಯ ಮಂಕಿಪಾಕ್ಸ್ ಟೆಸ್ಟಿಂಗ್ ವರದಿ ಬಂದಿದ್ದು ನೆಗೆಟಿವ್ ಎಂದು ತಿಳಿದುಬಂದಿದೆ. ಸೋಂಕಿನ ಲಕ್ಷಣಗಳಿತ್ತಾದರೂ ಅದು ಸ್ಮಾಲ್ ಪಾಕ್ಸ್ (ಚಿಕನ್ ಪಾಕ್ಸ್) ಆಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ ಮಂಕಿಪಾಕ್ಸ್ ಬಂದಿಲ್ಲ. ರಾಜ್ಯದ ಗಡಿಗಳು ಸೇರಿದಂತೆ ವಿಮಾನ ನಿಲ್ದಾಣ, ಪೋರ್ಟ್ಗಳಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ೨೪ ಗಂಟೆಗಳ ಮುಂಜಾಗೃತೆ ವಹಿಸಲಾಗಿದೆ. ಮೂರು ಪಾಳಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೇರೆ ಬೇರೆ ರಾಜ್ಯದಲ್ಲಿ ಮಂಕಿಪಾಕ್ಸ್ ಕಾಣಿಸಿದೆ. ಆದ್ರೆ ರಾಜ್ಯ ಪ್ರವೇಶ ಮಾಡಲು ಅವಕಾಶ ಕೊಟ್ಟಿಲ್ಲ ಎಂದು ಮಾಹಿತಿ ನೀಡಿದರು. ಮಂಕಿಪಾಕ್ಸ್ ಮುನ್ನೆಚ್ಚರಿಕೆ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಸೋಂಕು ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಬೆಂಗಳೂರು, ಮಂಗಳೂರು ಏರ್ ಪೋರ್ಟ್ಗಳಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಶೀತ- ಜ್ವರ, ತಲೆನೋವು, ಸ್ನಾಯು ಸೆಳೆತ, ಆಯಾಸ, ಗಂಟಲು ಕೆರೆತ, ಕೆಮ್ಮು, ಚರ್ಮ ತುರಿಕೆ ಲಕ್ಷಣಗಳು ಕಂಡು ಬರುವ ಪ್ರಯಾಣಿಕರಿಗೆ ತಪಾಸಣೆ ನಡೆಸಲಾಗುತ್ತದೆ ಎಂದು ಸಚಿವ ಸುಧಾಕರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.