ಸೋಮವಾರಪೇಟೆ,ಆ.೧: ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್‌ನ ವತಿಯಿಂದ ತಾ. ೩ ರಂದು ವೀರಾಜಪೇಟೆಯ ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ಪೂರ್ವಾಹ್ನ ೧೦ ಗಂಟೆಗೆ ಕಕ್ಕಡ ೧೮ ಆಚರಣೆ ನಡೆಯಲಿದೆ ಎಂದು ಪರಿಷತ್‌ನ ಅಧ್ಯಕ್ಷರಾದ ಬಾಚರಣಿಯಂಡ ರಾಣು ಅಪ್ಪಣ್ಣ ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಡಿಕೇರಿ ನಗರಸಭೆಯ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಪಾಲ್ಗೊಳ್ಳಲಿದ್ದಾರೆ. ಕಾವೇರಿ ಕಾಲೇಜು ಉಪನ್ಯಾಸಕರಾದ ಡಾ.ಮುಲ್ಲೇಂಗಡ ರೇವತಿ ಪೂವಯ್ಯ ವಿಚಾರ ಮಂಡನೆ ಮಾಡಲಿದ್ದಾರೆ.