ಬರ್ಮಿಂಗA, ಆ. ೧: ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಭಾರತದ ವೇಟ್ ಲಿಫ್ಟರ್ ಅಚಿಂತಾ ಶೆಯುಲಿ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಮೂರು ಚಿನ್ನದ ಪದಕದೊಂದಿಗೆ ಭಾರತದ ಪದಕಗಳ ಸಂಖ್ಯೆ ಆರಕ್ಕೇರಿದೆ.
೨೦ ವರ್ಷದ ಅಚಿಂತಾ ಶೆಯುಲಿ ಅವರು ೭೩ ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಮೊದಲ ಬಾರಿಗೆ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅಚಿಂತಾ ಒಟ್ಟು ೩೧೩ ಕೆಜಿ ಭಾರ ಎತ್ತಿದರು. ಕೂಟದಲ್ಲಿ ಬೆಳ್ಳಿ ಪದಕ ಪಡೆದ ಮಲೇಶ್ಯಾ ಎರ್ರಿ ಹಿದಾಯತ್ ಮುಹಮ್ಮದ್ ಅವರು ಅಚಿಂತಗಿAತ ಹತ್ತು ಕೆಜಿ ಕಡಿಮೆ ಭಾರ ಎತ್ತಿದರು.