ಸೋಮವಾರಪೇಟೆ, ಜು. ೩೧: ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಾಲೆ ಮತ್ತು ಶಿಕ್ಷಕರಷ್ಟೇ ಪಾತ್ರ ಕುಟುಂಬ ಹಾಗೂ ಪಾಲಕರದ್ದು ಎಂಬುದನ್ನು ಮರೆಯಬಾರದು ಎಂದು ಮೈಸೂರು ದೀಕ್ಷಾ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಹೆಚ್.ಆರ್. ಪಾಂಡುರAಗ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪೋಷಕರ ಹಾಗೂ ಶಿಕ್ಷಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯದಿಂದಲೇ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ಸಂಸ್ಕಾರವನ್ನು ಸೋಮವಾರಪೇಟೆ, ಜು. ೩೧: ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಾಲೆ ಮತ್ತು ಶಿಕ್ಷಕರಷ್ಟೇ ಪಾತ್ರ ಕುಟುಂಬ ಹಾಗೂ ಪಾಲಕರದ್ದು ಎಂಬುದನ್ನು ಮರೆಯಬಾರದು ಎಂದು ಮೈಸೂರು ದೀಕ್ಷಾ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಹೆಚ್.ಆರ್. ಪಾಂಡುರAಗ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪೋಷಕರ ಹಾಗೂ ಶಿಕ್ಷಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯದಿಂದಲೇ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ಸಂಸ್ಕಾರವನ್ನು ಬದಲಿಗೆ ಅವರಿಗೆ ಉತ್ತಮ ಶಿಕ್ಷಣವನ್ನು ಕೊಡಿಸುವ ಮೂಲಕ ಸಮಾಜಕ್ಕೆ ಅವರನ್ನು ಆಸ್ತಿವಂತರನ್ನಾಗಿ ಮಾಡಿ ಎಂದು ಸಲಹೆ ನೀಡಿದರು.
ಜಿಲ್ಲಾ ವಸತಿ ಶಾಲೆಗಳ ಶಿಕ್ಷಣ ಸಂಸ್ಥೆಯ ಸಮನ್ವಯಾಧಿಕಾರಿ ಲೋಕೇಶ್ ಮಾತನಾಡಿ, ತೋಳೂರು ಶೆಟ್ಟಳ್ಳಿಯಲ್ಲಿ ರೂ.೨೮ ಕೋಟಿ ವೆಚ್ಚದಲ್ಲಿ ವಸತಿ ಶಾಲೆಯ ಕಟ್ಟಡ ನಿರ್ಮಾಣವಾಗುತ್ತಿದೆ. ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯದಲ್ಲಿಯೇ ಸೋಮವಾರಪೇಟೆಯಿಂದ ಅಂಬೇಡ್ಕರ್ ವಸತಿ ಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗುವುದು ಎಂದರು.
ಸಭೆಯ ಅಧ್ಯಕ್ಷತೆಯನ್ನು ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ವಹಿಸಿದ್ದರು.ಶಿಕ್ಷಕರಾದ ಭವ್ಯಾ, ಗೌತಮಿ, ಶಬಾನಾ, ಪುಷ್ಪಲತಾ, ಮೇಘಾ, ಆಶಾ, ಶಬರಿಗಿರೀಶ್, ನರ್ಸ್ ಶೈಲಾ, ಗುಮಾಸ್ತ ಅಭಿಷೇಕ್ ಉಪಸ್ಥಿತರಿದ್ದರು. ಇದೇ ಸಂದರ್ಭ ವಸತಿ ಶಾಲೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಲೋಕೇಶ್ ಅವರಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ಶಾಲೆಯ ವಿದ್ಯಾರ್ಥಿಗಳಾದ ನೀತಾ,ಮಾನಸ, ವೈಷ್ಣವಿ ಅವರುಗಳನ್ನು ಸನ್ಮಾನಿಸಲಾಯಿತು.