ಮಡಿಕೇರಿ, ಆ. ೧: ಆಗಸ್ಟ್ ೧೩ ರಿಂದ ೧೫ ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನ ವನ್ನು ಯಶಸ್ವಿಗೊಳಿಸುವಂತೆ ಸರ್ಕಾರಿ ನೌಕರರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಕರೆ ನೀಡಿದ್ದಾರೆ.

ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ತಮ್ಮ ಮನೆಗಳ ಮೇಲೆ ರಾಷ್ಟç ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿ ಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಬಣ್ಣಿಸಿದ್ದಾರೆ.

ರಾಷ್ಟçದೆಲ್ಲೆಡೆಯಂತೆ, ರಾಜ್ಯ ದಲ್ಲಿಯೂ ಆಗಸ್ಟ್ ೧೩ ರಿಂದ ೧೫ ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ. ಭಾರತ ಸ್ವಾತಂತ್ರö್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ಇಡೀ ರಾಷ್ಟçದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಅದರಂತೆ ಈ ಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಬಣ್ಣಿಸಿದ್ದಾರೆ.

ರಾಷ್ಟçದೆಲ್ಲೆಡೆಯಂತೆ, ರಾಜ್ಯ ದಲ್ಲಿಯೂ ಆಗಸ್ಟ್ ೧೩ ರಿಂದ ೧೫ ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ. ಭಾರತ ಸ್ವಾತಂತ್ರö್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ಇಡೀ ರಾಷ್ಟçದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಅದರಂತೆ ಈ ಅಭಿಯಾನಕ್ಕೆ ಕರ್ನಾಟದಲ್ಲೂ ಪೂರ್ಣ ಪ್ರಮಾಣದ ಸ್ಪಂದನ ದೊರೆಯ ಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದೆ.

ರಾಷ್ಟç ಧ್ವಜದ ಮುಂದೆ ನಿಂತು ಸೆಲ್ವಿ ತೆಗೆದು ಹರ್ ಘರ್ ತಿರಂಗಾ ಅಂತರ್ಜಾಲ ತಾಣ hಣಣಠಿs://hಚಿಡಿghಚಿಡಿಣiಡಿಚಿಟಿgಚಿ.ಛಿom ರಲ್ಲಿ ಅಪ್ ಲೋಡ್ ಮಾಡುವ ಮೂಲಕ ಪ್ರತಿಯೊಬ್ಬರೂ ರಾಷ್ಟçಪ್ರೇಮವನ್ನು ದುಪ್ಪಟ್ಟುಗೊಳಿಸುವ ಈ ವಿಶೇಷ ಅಭಿಯಾನದಲ್ಲಿ ಭಾಗವಹಿಸಿ ದೇಶಾಭಿಮಾನವನ್ನು ಪ್ರದರ್ಶಿಸೋಣ ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹೇಳಿದ್ದಾರೆ.