ಸೋಮವಾರಪೇಟೆ, ಅ. ೧: ನಿರ್ಮಾಣ ಹಂತದಲ್ಲಿ ರುವ ಇಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ೩ ಲಕ್ಷ ಧನ ಸಹಾಯವನ್ನು ನೀಡಲಾಯಿತು. ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷ ಹೆಚ್.ಕೆ. ಮಾದಪ್ಪ ಅವರು ರೂ. ೩ಲಕ್ಷ ಮೌಲ್ಯದ ಚೆಕ್ನ್ನು ದೇವಾಲಯ ಸಮಿತಿ ಅಧ್ಯಕ್ಷ ಬನ್ನಳ್ಳಿ ಗೋಪಾಲ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸೀತಾರಾಮ್ ಅವರುಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭ ಸಹಕಾರ ಸಂಘದ ಕಾರ್ಯನಿರ್ವಹಣಾಧಿ ಕಾರಿ ರವೀಂದ್ರ, ನಿರ್ದೇಶಕರುಗಳು, ದೇವಾಲಯ ಸಮಿತಿಯ ಕಾರ್ಯದರ್ಶಿ ನಂದಕುಮಾರ್, ಪ್ರಮುಖರಾದ ಸಿ.ಸಿ. ನಂದ, ಎಂ.ಸಿ. ರಾಘವ ಸೇರಿದಂತೆ ಇತರರು ಉಪಸ್ಥಿತರಿದ್ದರು.