ನಾಪೋಕ್ಲು, ಆ. ೧: ನಾಪೋಕ್ಲು (ಇಂದು) ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ತಾ. ೨ ರಂದು ಬೆಳಿಗ್ಗೆ ೧೦ ಗಂಟೆಗೆ ನಾಪೋಕ್ಲು ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಕಕ್ಕಡ-೧೮ ತೀನಿ ನಮ್ಮೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಮೂವೇರ ರೇಖಾ ಪ್ರಕಾಶ್ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಮಡಿಕೇರಿ ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಉದ್ಘಾಟಿಸಿದ್ದು, ಬಿದ್ದಾಟಂಡ ಮೇರಿ ಚಂಗಪ್ಪ, ಅಪ್ಪುಮಣಿಯಂಡ ಡೇಸಿ ಸೋಮಣ್ಣ, ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.