ಮಡಿಕೇರಿ, ಆ. ೧: ಪರಿಶಿಷ್ಟ ಜಾತಿ, ವರ್ಗದ ಅಲೆಮಾರಿ, ಅರೆಅಲೆಮಾರಿ, ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಸದಸ್ಯರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಪರಿಶಿಷ್ಟ ಜಾತಿ/ ವರ್ಗದ ಅಲೆಮಾರಿ, ಅರೆಅಲೆಮಾರಿ, ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಸಮುದಾಯಗಳ ಜನಾಂಗದವರು ಅರ್ಜಿ ಸಲ್ಲಿಸಬಹುದು.

ಸಮಿತಿಯ ಸದಸ್ಯತ್ವ ಹೊಂದಲು ಬಯಸುವವರು ಅವರ ಸ್ವ ವಿವರದೊಂದಿಗೆ ಜಾತಿ ದೃಢೀಕರಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಗತ್ತಿಸಬೇಕು. ಆಗಸ್ಟ್ ೧೦ ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತಿ ಸೂಕ್ಷö್ಮ ಸಮುದಾಯಗಳ ಅಭಿವೃದ್ಧಿ ಕೋಶ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಗೆ ಸಲ್ಲಿಸಬೇಕು ಎಂದು ಅಲೆಮಾರಿ ಅಭಿವೃದ್ಧಿ ಕೋಶದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.