ಮಡಿಕೇರಿ, ಆ. ೩: ತಾ.೪ ರಂದು (ಇಂದು) ವಿಶ್ವವಿದ್ಯಾನಿಲಯ ಮಟ್ಟದ ಪ್ರಶಿಕ್ಷಣ ಕಾರ್ಯಾಗಾರ ನಗರದ ಫೀ.ಮಾ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ.ಪಿ.ಎಸ್ ಯಡಪಡಿತ್ತಾಯ ಅವರು ಕಾರ್ಯಾಗಾರವನ್ನು ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟಿಸಲಿದ್ದಾರೆ. ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸಿ ಜಗತ್ ತಿಮ್ಮಯ್ಯ ಅವರು ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಸಾಂಸ್ಥಿಕ ಅಭಿವೃದ್ಧಿ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಶಿಕಾರಿಪುರ ಕೃಷ್ಣಮೂರ್ತಿ, ಪತ್ರಕರ್ತ ನಂದ ಗೋಪಾಲ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಪ್ರೊ ಬಿ.ಎಸ್ ಶಾಸ್ತಿçà ಅವರು ಭಾಗವಹಿಸಲಿದ್ದಾರೆ.