ಮಡಿಕೇರಿ, ಆ. ೨: ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ತಾ. ೭ ರಂದು ಬೆಳಿಗ್ಗೆ ೯.೩೦ ರಿಂದ ಮಡಿಕೇರಿ ಕೊಡವ ಸಮಾಜದಲ್ಲಿ ಕಕ್ಕಡ ನಮ್ಮೆ ಒತ್ತೊರ್ಮೆ ಕೂಟ ಕಾರ್ಯಕ್ರಮ ನಡೆಯಲಿದೆ.

ಮಾಜಿ ಎಂಎಲ್‌ಸಿ ಶಾಂತೆಯAಡ ವೀಣಾ ಅಚ್ಚಯ್ಯ ಉದ್ಘಾಟಿಸಲಿದ್ದು, ಒಕ್ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ, ಕೊಡವ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಜನರಲ್ ತಿಮ್ಮಯ್ಯ ಶಾಲೆಯ ಪ್ರಾಂಶುಪಾಲೆ ಕಲ್ಮಾಡಂಡ ಸರಸ್ವತಿ, ಗೋಣಿಕೊಪ್ಪ ಲಯನ್ಸ್ ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಚೋಕಿರ ಪವಿತ್ರಾ ಪಾಲ್ಗೊಳ್ಳಲಿದ್ದಾರೆ.

ಕಕ್ಕಡ ಖಾದ್ಯಗಳ ಸ್ಪರ್ಧೆ, ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.