ಮಡಿಕೇರಿ, ಆ. ೩: ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ಸುಬ್ರಹ್ಮಣ್ಯ ಸಮೀಪದ ಕಡಮಕಲ್ಲು ಗ್ರಾಮ ವ್ಯಾಪ್ತಿಯಲ್ಲಿ ಉಂಟಾಗಿರುವ ಮಳೆಹಾನಿ ಪ್ರದೇಶಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮತ್ತು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಭೇಟಿ ನೀಡಿ ಪರಿಶೀಲಿಸಿದರು.

ಕಡಮಕಲ್ಲು ಗ್ರಾಮ ವ್ಯಾಪ್ತಿಯಲ್ಲಿ ಸತತ ಸುರಿಯುತ್ತಿರುವ ಮಳೆ ಯಿಂದಾಗಿ ೫ ಮನೆಗಳಿಗೆ ಹಾನಿಯಾಗಿದ್ದು, ಕೂಡಲೇ ಪರಿಹಾರ ವಿತರಿಸುವಂತೆ ಶಾಸಕರು ತಿಳಿಸಿದರು.

ವ್ಯಾಪಕ ಮಳೆಯಿಂದಾಗಿ ಕೃಷಿ ಬೆಳೆಗೆ ಹಾನಿಯಾಗಿದ್ದು, ಕೃಷಿ ಬೆಳೆ ಹಾನಿಗೆ ಪರಿಹಾರ ವಿತರಿಸಬೇಕು. ಸುಬ್ರಹ್ಮಣ್ಯ ಕಡಮಕಲ್ಲು ಮಾರ್ಗ ರಸ್ತೆ ಮತ್ತು ಸೇತುವೆ ಹಾನಿಯಾಗಿದ್ದು, ಇದನ್ನು ತಕ್ಷಣವೇ ಸಂಬAಧಪಟ್ಟ ಇಲಾಖೆ ಎಂಜಿನಿಯರ್‌ಗಳು ಸರಿಪಡಿಸುವಂತೆ ಎಂ.ಪಿ. ಅಪ್ಪಚ್ಚು ರಂಜನ್ ಸೂಚಿಸಿದರು.

ಕಡಮಕಲ್ಲು ಗ್ರಾಮ ವ್ಯಾಪ್ತಿಯಲ್ಲಿ ಆಗಬೇಕಿರುವ ಮೂಲ ಸೌಲಭ್ಯ ಸಂಬAಧ ಗ್ರಾಮಸ್ಥರಿಂದ ಇದೇ ಸಂದರ್ಭದಲ್ಲಿ ಮಾಹಿತಿ ಪಡೆದರು.

ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ತಹಶೀಲ್ದಾರ್ ಪಿ.ಎಸ್. ಮಹೇಶ್, ಗ್ರಾ.ಪಂ. ಸದಸ್ಯ ಸುಭಾಷ್, ಪಿಡಿಓ ಶಶಿಕಿರಣ ಇತರರು ಇದ್ದರು.