ಮಡಿಕೇರಿ, ಆ.೨: ಮುಂದಿನ ೧೦ ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಜೊತೆ ನಡೆದ ವೀಡಿಯೋ ಸಂವಾದದಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಮನೆ ಹಾನಿಗೆ ಸಂಬAಧಿಸಿದAತೆ ಕೂಡಲೇ ಪರಿಹಾರ ವಿತರಿಸಬೇಕು. ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದAತೆ ಗಮನಹರಿಸಬೇಕು. ಈಗಾಗಲೇ ಕೈಗೊಂಡಿರುವ ವಿಶೇಷ ಕಾರ್ಯಪಡೆ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳ ಕಾರ್ಯನಿರ್ವಹಣೆ, ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವುದು ಮತ್ತಿತರವನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದರು.
ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಸಂಬAಧಿಸಿದAತೆ ಮಾಹಿತಿ ಪಡೆದ ಮುಖ್ಯಮಂತ್ರಿ ಅವರು, ತಡೆಗೋಡೆಗೆ ಸದ್ಯ ಮರಳು ಮೂಟೆಗಳನ್ನು ಅಳವಡಿಸಲಾಗಿದ್ದು, ಲಘು ವಾಹನ ಸಂಚಾರಕ್ಕೆ ಅವಕಾಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಆಯೋಗದ ಆಯುಕ್ತ ಡಾ.ಮನೋಜ್ ರಾಜನ್ ಅವರು ಮಾಹಿತಿ ನೀಡಿ ಮುಂದಿನ ಒಂದು ವಾರಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಭೂಕುಸಿತ ಪ್ರದೇಶಗಳಲ್ಲಿನ ಜನರಿಗೆ ಮಾಹಿತಿ ನೀಡಿ, ಸ್ಥಳಾಂತರಿಸಬೇಕು. ಸಹಾಯವಾಣಿ ಕೇಂದ್ರಗಳು ಸಂಪರ್ಕದಲ್ಲಿರಬೇಕು. ಎಸ್ಡಿಆರ್ಎಫ್, ಎನ್ಡಿಆರ್ಎಫ್ ಹಾಗೂ ಅಧಿಕಾರಿಗಳ ತಂಡಗಳು ಎಚ್ಚರ ಇರಬೇಕು ಎಂದು ಅವರು ತಿಳಿಸಿದರು. ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ತಹಶೀಲ್ದಾರ್ ಪಿ.ಎಸ್.ಮಹೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಾರಾಯಣ ರೆಡ್ಡಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವು ಇತರರು ಇದ್ದರು.
ಅಧಿಕಾರಿಗಳ ಜತೆ ಚರ್ಚೆ: ವೀಡಿಯೋ ಸಂವಾದ ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮುಂದಿನ ಹತ್ತು-ಹದಿನೈದು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ಗುರುತಿಸಲಾಗಿರುವ ೪೩ ಗ್ರಾಮಗಳ ಸೂಕ್ಷö್ಮ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಬೇಕಿದೆ ಎಂದರು.
ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಹಾಗೂ ಸೆಸ್ಕ್ ವಿಭಾಗಗಳು ಅಗತ್ಯ ಮೂಲಸೌಲಭ್ಯ ಸಂಬAಧ ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು. ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಎರಡನೇ ಮೊಣ್ಣಂಗೇರಿ ಮತ್ತು ತೋರ ಗ್ರಾಮಗಳಲ್ಲಿನ ಜನರನ್ನು ಹೆಚ್ಚಿನ ಮಳೆಯಾದಲ್ಲಿ ಸ್ಥಳಾಂತರಿಸಬೇಕಿದೆ ಎಂದರು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವು ಅವರು ಈ ಬಾರಿ ಗಾಳಿಬೀಡು, ಮದೆ, ಕರ್ಣಂಗೇರಿ ಮತ್ತಿತರ ಗ್ರಾ.ಪಂ.ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗಿದ್ದು, ಇಂತಹ ಕಡೆಗಳಲ್ಲಿ ಹೆಚ್ಚಿನ ಗಮನಹರಿಸಬೇಕಿದೆ. ಜೊತೆಗೆ ತಾ. ೧೫ ರವರೆಗೆ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದರು.