ಸೋಮವಾರಪೇಟೆ, ಆ. ೨: ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆAದು ಪರಿಗಣಿಸಲ್ಪಟ್ಟಿರುವ ಪತ್ರಿಕೋದ್ಯಮವು ಸವಾಲಿನ ಕ್ಷೇತ್ರವಾಗಿದ್ದು, ಪತ್ರಕರ್ತರ ಸಾಮಾಜಿಕ ಭದ್ರತೆಗಾಗಿ ಪ್ರತ್ಯೇಕ ಮಂಡಳಿ ಸ್ಥಾಪನೆಗೆ ಸರ್ಕಾರ ಕ್ರಮ ವಹಿಸಬೇಕೆಂದು ಕಾರ್ಮಿಕ ಸಂಘಟನೆ ಹಾಗೂ ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಹೇಳಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಲೂರು ಸಿದ್ದಾಪುರ ಸರ್ಕಾರಿ ಪದವಿ ಪೂರ್ವ ಕಾಲೀಜಿನ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರು ವಸ್ತುನಿಷ್ಠ ವರದಿಗೆ ಪ್ರಾಮುಖ್ಯತೆ ನೀಡಬೇಕು. ತಮ್ಮ ವೈಯಕ್ತಿಕ ಸಿದ್ಧಾಂತಗಳಿಗೆ ಜೋತು ಬೀಳಬಾರದು. ಪತ್ರಿಕಾ ಕ್ಷೇತ್ರ ಸವಾಲಿನ ಕೆಲಸವಾಗಿದ್ದು, ಪತ್ರಕರ್ತರು ಇಂದಿಗೂ ಅಭದ್ರತೆಯಲ್ಲಿದ್ದಾರೆ. ಸ್ವಾತಂತ್ರö್ಯ ಬಂದು ೭೫ ವರ್ಷಗಳಾದರೂ ಈ ಕ್ಷೇತ್ರದ ಬಗ್ಗೆ ಸರ್ಕಾರಗಳು ಗಮನ ಹರಿಸುತ್ತಿಲ್ಲ. ಇನ್ನಾದರೂ ಪ್ರತ್ಯೇಕ ಮಂಡಳಿ ರಚಿಸುವ ಮೂಲಕ ಪತ್ರಕರ್ತರ ಅಭ್ಯುದಯಕ್ಕೆ ಸರ್ಕಾರ ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಮಾತನಾಡಿ, ಯುವ ಜನಾಂಗ ಪತ್ರಿಕೋದ್ಯಮದತ್ತ ಒಲವು ತೋರಿಸಬೇಕು. ದೈನಂದಿನ ಆಗು ಹೋಗುಗಳ ಬಗ್ಗೆ ತಿಳಿದುಕೊಳ್ಳುವ ಹಂಬಲ ಇರಬೇಕು. ಸಮಾಜದ ಬಗ್ಗೆ ಕಾಳಜಿ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
ಪತ್ರಕರ್ತರಿಂದ ಎಲ್ಲವನ್ನೂ ನಿರೀಕ್ಷಿಸುವ ಸಮಾಜವು, ಪತ್ರಕರ್ತರು ಸಂಕಷ್ಟಕ್ಕೆ ಒಳಗಾದಾಗ ಅವರುಗಳ ಸಹಕಾರಕ್ಕೆ ಧಾವಿಸಬೇಕು. ಸಾಮಾಜಿಕ ಬದ್ಧತೆಯೊಂದಿಗೆ ಕೊಡಗಿನ ಪತ್ರಿಕೋದ್ಯಮ ಕಾರ್ಯ ನಿರ್ವಹಿಸುತ್ತಿರುವದು ಹೆಮ್ಮೆಯ ವಿಷಯ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಲಂಬಿ ಗಂಗಾಧರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದಮಯಂತಿ ಕರುಂಬಯ್ಯ, ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಚೆರಿಯಮನೆ ಸುರೇಶ್, ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ರಾಘವಿ ಅವರುಗಳು ಉಪಸ್ಥಿತರಿದ್ದರು.
ಪ್ರಬಂಧ ಸ್ಪರ್ಧೆ: ಪತ್ರಿಕಾದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಮುದ್ರಣ-ದೃಶ್ಯ ಮಾಧ್ಯಮಗಳಿಂದ ಯುವ ಜನಾಂಗ ವಿಮುಖ-ಪರಿಣಾಮಗಳೇನು?’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸಲಾಯಿತು. ವಿದ್ಯಾರ್ಥಿಗಳಾದ ಜಮುನ ಪ್ರಥಮ, ಟಿ.ಆರ್. ದರ್ಶನ್ ದ್ವಿತೀಯ, ಲಕ್ಷಿö್ಮÃ ತೃತೀಯ ಸ್ಥಾನಗಳಿಸಿದರು. ವಿಜೇತರಿಗೆ ನಗದು ಸೇರಿದಂತೆ ಬರೆಯುವ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.
ಸನ್ಮಾನ: ಕಾರ್ಯಕ್ರಮದಲ್ಲಿ ಆಲೂರುಸಿದ್ದಾಪುರ ವ್ಯಾಪ್ತಿಯ ಹಿರಿಯ ಪತ್ರಿಕಾ ವಿತರಕರಾದ ಹೆಚ್.ಪಿ. ಬೆಳ್ಳಿಯಪ್ಪ ಅವರನ್ನು ಸನ್ಮಾನಿಸಲಾಯಿತು.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯ್ ಹಾನಗಲ್ ಕಾರ್ಯಕ್ರಮ ನಿರ್ವಹಿಸಿದರೆ, ಖಜಾಂಚಿ ಬಿ.ಎ. ಭಾಸ್ಕರ್ ಸ್ವಾಗತಿಸಿದರು. ಕಾರ್ಯದರ್ಶಿ ಡಿ.ಪಿ. ಲೋಕೇಶ್, ಉಪಾಧ್ಯಕ್ಷ ವಿಶ್ವ ಕುಂಬೂರು, ನಿರ್ದೇಶಕರುಗಳಾದ ಹಿರಿಕರ ರವಿ, ಮುಳ್ಳೂರು ಭಾಸ್ಕರ್, ಲಕ್ಷಿö್ಮÃಕಾಂತ್ ಕೊಮಾರಪ್ಪ, ಧರಣಿ ಅವರುಗಳು ಉಪಸ್ಥಿತರಿದ್ದರು.