ಗೋಣಿಕೊಪ್ಪ, ಆ. ೨: ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಕೆರೆ-ಪಾಲದಳ ಕಾಲೋನಿಗೆ ಸಂಪರ್ಕ ಕಲ್ಪಿಸುವ ತಾಣಚ್ಚೀರ ಕಾಶಿ ಕಾರ್ಯಪ್ಪ ರಸ್ತೆಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.

ಕಾವೇರಿ ನೀರಾವರಿ ನಿಗಮದ ರೂ. ೯೫ ಲಕ್ಷ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ.

ಈ ವೇಳೆ ಮಾತನಾಡಿದ ಶಾಸಕರು ರಸ್ತೆಗಳು ಸಾರ್ವಜನಿಕರ ಅನುಕೂಲಕ್ಕಾಗಿಯೇ ನಿರ್ಮಾಣವಾಗುವಂತದ್ದು. ರಸ್ತೆ ನಿರ್ಮಾಣಕ್ಕೆ ಸರ್ಕಾರದ ಅನುದಾನ ಬಂದಾಗ ಆಕ್ಷೇಪ ವ್ಯಕ್ತಪಡಿಸದೇ ಒಂದಷ್ಟು ಸ್ಥಳಗಳನ್ನು ತೋಟದ ಮಾಲೀಕರು ನೀಡಿ ಸಹಕಾರದ ಮನೋಭಾವ ವ್ಯಕ್ತಪಡಿಸಿದಾಗ ಅಭಿವೃದ್ಧಿ ಕಾರ್ಯಗಳು ಸಾಧ್ಯವಾಗುತ್ತದೆ ಎಂದರು. ಈ ನಿಟ್ಟಿನಲ್ಲಿ ತಾಣಚ್ಚೀರ ದಿವಂಗತ ಕಾಶಿ ಕಾರ್ಯಪ್ಪ ಅವರ ಪತ್ನಿ ಬೋಜಮ್ಮ ಮತ್ತು ಅವರ ಮಕ್ಕಳು ಸುಮಾರು ಎರಡೂವರೆ ಎಕರೆಯಷ್ಟು ಜಾಗವನ್ನು ರಸ್ತೆ ನಿರ್ಮಾಣಕ್ಕಾಗಿ ಉದಾರವಾಗಿ ನೀಡಿರುವುದು ಶ್ಲಾಘನೀಯ ಎಂದು ಹೇಳಿದರು. ತಾಣಚ್ಚೀರ ಬೋಜಮ್ಮ ಅವರನ್ನು ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು.

ಪಾಲದಳ, ಯರವರ ಕಾಲೋನಿಗೆ ಸಂಪರ್ಕ ಬೆಸೆಯುವ ರಸ್ತೆ ಮತ್ತು ಕಿರುಸೇತುವೆ ನಿರ್ಮಾಣಕ್ಕಾಗಿ ರೂ. ೫೦ ಲಕ್ಷ ಅನುದಾನವನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಾಟಿಮಾಡ ಶರೀನ್ ಮುತ್ತಣ್ಣ ಮಾತನಾಡಿ, ಕಳೆದ ೪೦ ವರ್ಷಗಳ ಅವಧಿಯ ಈ ಭಾಗದ ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ರಸ್ತೆ ನಿರ್ಮಾಣವಾಗಿದೆ ಎಂದರು.

ಗ್ರಾ.ಪA. ಮಾಜಿ ಅಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ ಮಾತನಾಡಿ, ಶಾಸಕರ ಕಾಳಜಿಯಿಂದ ಈ ಭಾಗದಲ್ಲಿ ಅಭಿವೃದ್ಧಿಗಳ ಕನಸ್ಸು ಹಂತ ಹಂತವಾಗಿ ನನಸಾಗುತ್ತಿದೆ ಎಂದು ಹೇಳಿದರು.

ಬಾಳೆಲೆ ವಿ.ಎಸ್.ಎಸ್.ಎನ್. ಬ್ಯಾಂಕ್ ಅಧ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ, ವಿಜಯಲಕ್ಷಿö್ಮ ಪದವಿಪೂರ್ವ ಕಾಲೇಜು ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಗ್ರಾಮಸ್ಥರಾದ ಮುಕ್ಕಾಟೀರ ಗಣೇಶ್, ಮಲ್ಚೀರ ನಾಣಯ್ಯ ಗ್ರಾಮದ ಅಭಿವೃದ್ಧಿಗೆ ಮತ್ತಷ್ಟು ಅನುದಾನವನ್ನು ಒದಗಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು.

ಉಪಾಧ್ಯಕ್ಷೆ ಪಡಿಞರಂಡ ಕವಿತಾಪ್ರಭು, ಸದಸ್ಯರಾದ ಚಕ್ಕೇರ ಸೂರ್ಯ ಅಯ್ಯಪ್ಪ, ಅಳಮೇಂಗಡ ಆರ್. ಪವಿತಾ, ವಿಜಯಲಕ್ಷಿö್ಮ ಪದವಿಪೂರ್ವ ಕಾಲೇಜು ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಅಕ್ರಮ ಸಕ್ರಮ ತಾಲೂಕು ಸಮಿತಿ ಸದಸ್ಯ ಮಾಪಂಗಡ ಯಮುನಾ ಚಂಗಪ್ಪ, ರಸ್ತೆ ನಿರ್ಮಾಣಕ್ಕೆ ಸ್ಥಳ ಧಾನ ಮಾಡಿದ ತಾಣಚ್ಚೀರ ಲೆಹರ್ ಬಿದ್ದಪ್ಪ, ಲೋಕೇಶ್ ಕುಟ್ಟಪ್ಪ ಸಹೋದರರು, ಪೊನ್ನಂಪೇಟೆ ಎಪಿಸಿಎಂಎಸ್ ಅಧ್ಯಕ್ಷ ಮುದ್ದಿಯಡ ಮಂಜು ಗಣಪತಿ, ಪೊನ್ನಪ್ಪಸಂತೆ ಗ್ರಾ.ಪಂ. ಸದಸ್ಯ ಆದೇಂಗಡ ವಿನು ಚಂಗಪ್ಪ, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಗಡ ಮಧು ದೇವಯ್ಯ, ಕಾವೇರಿ ನಿರಾವರಿ ನಿಗಮದ ಇಂಜಿನಿಯರ್ ನವೀನ್, ಗುತ್ತಿಗೆದಾರ ರೋಹಿತ್ ಹಾಗೂ ಗ್ರಾಮಸ್ಥರು ಇದ್ದರು.