*ಗೋಣಿಕೊಪ್ಪ, ಆ. ೨: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಾರ್ಮಾಡು ತನಿಖಾ ಠಾಣೆ ಹಾಗೂ ಮುಖ್ಯ ದ್ವಾರವನ್ನು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿದರು.
ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ, ನಾಗರಹೊಳೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಕುಮಾರ್ ಚಿಕ್ಕನರಗುಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪಿ. ಗೋಪಾಲ್, ಗ್ರಾ.ಪಂ. ಉಪಾಧ್ಯಕ್ಷೆ ಪಡಿಞರಂಡ ಕವಿತಾಪ್ರಭು, ಸದಸ್ಯರುಗಳಾದ ಚಕ್ಕೇರ ಸೂರ್ಯ ಅಯ್ಯಪ್ಪ, ಅಳಮೇಂಗಡ ಆರ್. ಪವಿತಾ, ವಿಜಯಲಕ್ಷಿö್ಮ ಪದವಿಪೂರ್ವ ಕಾಲೇಜು ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಅಕ್ರಮ-ಸಕ್ರಮ ತಾಲೂಕು ಸಮಿತಿ ಸದಸ್ಯ ಮಾಪಂಗಡ ಯಮುನಾ ಚಂಗಪ್ಪ, ತಾಣಚ್ಚಿರ ಲೆಹರ್ ಬಿದ್ದಪ್ಪ, ಪೊನ್ನಂಪೇಟೆ ಎಪಿಸಿಎಂಎಸ್ ಅಧ್ಯಕ್ಷ ಮುದ್ದಿಯಡ ಮಂಜು ಗಣಪತಿ, ಪೊನ್ನಪ್ಪಸಂತೆ ಗ್ರಾ.ಪಂ. ಸದಸ್ಯ ಆದೇಂಗಡ ವಿನು ಚಂಗಪ್ಪ ಇದ್ದರು.