ಸೋಮವಾರಪೇಟೆ, ಆ. ೨: ‘ಯಾರೂ ಕದಿಯಲಾರದ ಸಂಪತ್ತೆAದರೆ ಅದು ವಿದ್ಯೆ ಮಾತ್ರ; ಪೋಷಕರು ತಮ್ಮ ಮಕ್ಕಳನ್ನೇ ಆಸ್ತಿಯನ್ನಾಗಿ ರೂಪುಗೊಳಿಸಬೇಕು’ ಎಂದು ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಅಭಿಪ್ರಾಯಿಸಿದರು.

ಸಮೀಪದ ಶಾಂತಳ್ಳಿ ಶ್ರೀP ÀÄಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಕುಮಾರಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕಳೆದ ೨೨ ವರ್ಷಗಳಿಂದ ನಿರಂತರವಾಗಿ ನೋಟ್ ಪುಸ್ತಕಗಳನ್ನು ವಿತರಿಸಿಕೊಂಡು ಬರಲಾಗುತ್ತಿದೆ. ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿಯಾಗಬಾರದು. ಸತತ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ರವೀಂದ್ರ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕುಮಾರಲಿಂಗೇಶ್ವರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಕೆ. ಗೋಪಾಲ್ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಪ್ರಮುಖರಾದ ಟಿ.ಪಿ. ಚಂಗಪ್ಪ, ವೆಂಕಟೇಶ್, ಮುಖ್ಯೋಪಾಧ್ಯಾಯಿನಿ ಉಷಾ ಕುಮಾರಿ, ಪೋಷಕ-ಶಿಕ್ಷಕ ಸಮಿತಿ ಅಧ್ಯಕ್ಷ ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.