ನಾಪೋಕ್ಲು, ಆ. ೪: ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯAತೆ ಶ್ರಾವಣ ಶನಿವಾರವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಮಧ್ಯಾಹ್ನ ವೆಂಕಟೇಶ್ವರನಿಗೆ ವಿಶೇಷ ಪೂಜೆ ನೆರವೇರಿತು. ಮಹಾ ಮಂಗಳಾರತಿಯ ತೀರ್ಥ ಪ್ರಸಾದ ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಮಂಜಯ್ಯ ಟಿ.ಎಸ್, ಉಪಾಧ್ಯಕ್ಷ ಶ್ರೀನಿವಾಸ್ ಟಿ.ಆರ್., ಕಾರ್ಯಾಧ್ಯಕ್ಷ ರಮೇಶ್ ಟಿ.ಆರ್., ಕಾರ್ಯದರ್ಶಿ ಸುಜಿಕುಮಾರ್ ಟಿ.ಎ., ಖಜಾಂಚಿ ಗೋಪಾಲ ಯನ್.ಡಿ., ಹಾಗೂ ಹಿರಿಯರಾದ ಶ್ರೀನಿವಾಸ್, ಆನಂದಸ್ವಾಮಿ ಹಾಗೂ ಆಡಳಿತ ಮಂಡಳಿ ನಿರ್ದೇಶಕರು ಇತರರು ಹಾಜರಿದ್ದರು. ದೇವಾಲಯದ ಮುಖ್ಯ ಅರ್ಚಕ ಸುಧೀರ ಕೇಕುಣ್ಣಾಯ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.