ನಾಪೋಕ್ಲು, ಆ. ೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮುರ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಮತ್ತು ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯ ಧನಂಜಯ ಅವರು ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಮಕ್ಕಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ದುಶ್ಚಟವು ವೈಯಕ್ತಿಕ ಜೀವವನ್ನು ಮಾತ್ರವಲ್ಲದೆ, ಕುಟುಂಬವನ್ನೇ ನಾಶ ಮಾಡುತ್ತದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಯದ ದಿನೇಶ್ ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಗುರುರಾಜ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.