ಕುಶಾಲನಗರ, ಆ. ೪: ಕುಶಾಲನಗರ-ಕೊಪ್ಪ ಮತ್ತು ಬೈಲುಕೊಪ್ಪ ವ್ಯಾಪ್ತಿಯಲ್ಲಿ ಬುಧವಾರ ಸುರಿದ ಭಾರೀ ಮಳೆಯಿಂದಾಗಿ ನಷ್ಟ ಉಂಟಾಗಿರುವ ಗ್ರಾಮಗಳ ಮನೆಗಳಿಗೆ ಮೈಸೂರು ಜಿಲ್ಲಾಧಿಕಾರಿ ಬಗಾಧಿ ಗೌತಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಪ್ಪ ಮತ್ತು ಬೈಲುಕೊಪ್ಪ ಗ್ರಾ.ಪಂ. ವ್ಯಾಪ್ತಿಯ ಗುಡ್ಡೇನಹಳ್ಳಿ ಮತ್ತು ಟಿಬೆಟಿಯನ್ ನಿರಾಶ್ರಿತ ಶಿಬಿರದ ಬಳಿ ಕೆರೆಗಳು ಕೋಡಿ ಹರಿದು ಕೃಷಿ ಜಮೀನುಗಳಿಗೆ ನಷ್ಟ ಉಂಟಾಗಿತ್ತು. ಕೆಲವು ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾಗಿದ್ದು, ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ಬಗಾಧಿ ಗೌತಮ್, ಮಳೆ ಹಾನಿ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಮಳೆಯಿಂದ ಬಿರುಕು ಬಿಟ್ಟಿರುವ ಮನೆಗಳ ಪರಿಶೀಲನೆ ಹಾಗೂ ಮುಂಜಾಗ್ರತಾ ಕ್ರಮಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸ ಲಾಗಿದೆ ಎಂದರು. ಈ ಸಂದರ್ಭ ಹುಣಸೂರು ಉಪ ವಿಭಾಗಾಧಿಕಾರಿ ವರನೀತ್ ನೇಗಿ, ಪಿರಿಯಾಪಟ್ಟಣ ತಹಶೀಲ್ದಾರ್ ಚಂದ್ರಮೌಳಿ, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.