ಕೂಡಿಗೆ, ಆ. ೩: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣವನ್ನು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಕೂಡಿಗೆಯು ಇಂದು ಉತ್ತಮ ವಿದ್ಯಾಕ್ಷೇತ್ರವಾಗಿ ರೂಪುಗೊಂಡಿದೆ. ಸೈನಿಕ, ಕ್ರೀಡಾಶಾಲೆ, ಮೊರಾರ್ಜಿ ಶಾಲೆ, ಶಿಕ್ಷಕರ ತರಬೇತಿ ಕೇಂದ್ರ, ಕೃಷಿ ಕ್ಷೇತ್ರದ ವಿವಿಧ ತರಬೇತಿ ಕೇಂದ್ರಗಳನ್ನು ಇಲ್ಲಿ ಕಾಣಬಹುದು. ಕಾಲೇಜಿನ ಫಲಿತಾಂಶ ಮತಷÀÄ್ಟ ಅಭಿವೃದ್ಧಿ ಹೊಂದಬೇಕು. ಮುಂದಿನ ಸಾಲಿನಲ್ಲಿ ಶೇ. ೧೦೦ ಫಲಿತಾಂಶ ತರುವಲ್ಲಿ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹೆಚ್ಚಿನ ಮುತುವರ್ಜಿ ವಹಿಸ ಬೇಕಿದೆ ಎಂದರು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಕೆ. ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್, ಸದಸ್ಯರಾದ ಕೆ.ಕೆ. ಭೋಗಪ್ಪ, ಚಂದ್ರು, ಕುಮಾರ್, ಶಿವಮ್ಮ, ಪ.ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಕಾಲೇಜು ಪ್ರಾಂಶುಪಾಲ ಡಾ. ಬಿ. ಬಸಪ್ಪ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್, ತಾ.ಪಂ. ಮಾಜಿ ಸದಸ್ಯ ಗಣೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಮನು ನಂಜುAಡ, ಕಾಲೇಜು ಅಭಿವೃದ್ಧಿ ಸಮಿತಿ ಮಾಜಿ ಉಪಾಧ್ಯಕ್ಷ ಕುಮಾರ ಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.