ಮಡಿಕೇರಿ, ಆ. ೪ : ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಆಯ್ಕೆಯಾಗಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಸಂಬAಧ ಆದೇಶ ಪತ್ರ ಹಸ್ತಾಂತರಿಸುವ ಕಾರ್ಯಕ್ರಮವು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ತಾ. ೫ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ. ಇ ಓ ಶೇಖರ್ ತಿಳಿಸಿದ್ದಾರೆ.