ಕುಶಾಲನಗರ, ಆ. ೪: ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಕುಶಾಲನಗರ ಸರಕಾರಿ ಇಂಜಿನಿಯರಿAಗ್ ಕಾಲೇಜು ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತು.
ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ದಯಾನಂದ್ ಜನಸಂಖ್ಯಾ ಸ್ಫೋಟದ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭ ಕುಶಾಲನಗರ ಪ.ಪಂ. ಅಧ್ಯಕ್ಷ ಜೈವರ್ಧನ್, ಉಪಾಧ್ಯಕ್ಷೆ ಸುರಯ್ಯಭಾನು, ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ವೆಂಕಟೇಶ್, ಕಾರ್ಯಕ್ರಮ ಅಧಿಕಾರಿ ಡಾ. ಆನಂದ್, ಡಿಹೆಚ್‌ಓ ಶ್ರೀನಿವಾಸ್, ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ನಂದಿನಿ, ಡಿವೈಎಸ್ಪಿ ಗಂಗಾಧರಪ್ಪ, ಕಾಲೇಜು ಪ್ರಾಂಶುಪಾಲ ಡಾ. ಸೀನಪ್ಪ, ದೈಹಿಕ ಶಿಕ್ಷಣಾಧಿಕಾರಿ ಪ್ರಸಾದ್ ಸಾಲ್ಯಾನ್, ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ಮತ್ತಿತರರು ಗಣ್ಯರು ಇದ್ದರು. ಜನಸಂಖ್ಯಾ ಸ್ಫೋಟದ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.