ಮಡಿಕೇರಿ, ಆ. ೫: ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿ-ಮಳಿಗೆಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ಮಾಲೀಕರಿಗೆ ದಂಡ ವಿಧಿಸಲಾಗಿದೆ. ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ, ಮಾಂಸ ಮಳಿಗೆಗಳ ಮೇಲೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ದಂಡ ವಿಧಿಸಿದರು. ನಿಷೇಧಿತ ಪ್ಲಾಸ್ಟಿಕ್ ಮಾರಾಟವನ್ನು ಜಪ್ತಿ ಮಾಡಿ ರೂ. ೧೩ ಸಾವಿರ ದಂಡ ವಿಧಿಸಿ, ಸುಮಾರು ೮ ಕೆ.ಜಿ. ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ.

ಈಗಾಗಲೇ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೂ ಕೆಲವು ಅಂಗಡಿಗಳು ಎಚ್ಚರಿಕೆಯ ಬಳಿಕವೂ ನಿಷೇಧಿತ ಪ್ಲಾಸ್ಟಿಕ್ ಬಳಸಿದ್ದರಿಂದ ದಂಡ ವಿಧಿಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ ಎಂದರು.