ಮಡಿಕೇರಿ, ಆ. ೫: ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಪ್ರಬುದ್ಧ ನಾಗರಿಕರಾಗಿ ಬದುಕುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಸಲಹೆ ನೀಡಿದರು.

ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಡಾ. ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಾ. ಮಹಾಂತ ಶಿವಯೋಗಿ ಸ್ವಾಮೀಜಿ ಅವರು ಸಮಾಜದಲ್ಲಿರುವ ದುಶ್ಚಟಗಳನ್ನು ಹೋಗಲಾಡಿಸಲು ತಮ್ಮ ಜೀವಿತ ಅವಧಿಯಲ್ಲಿ ಸರ್ವ ಪ್ರಯತ್ನ ಮಾಡಿದರು. ದುಶ್ಚಟಗಳಿಗೆ ದಾಸರಾಗದೆ ಉತ್ತಮ ಬದುಕು ನಡೆಸಿಕೊಳ್ಳುವಂತಾಗಲು ಅರಿವು ಮೂಡಿಸಿದರು ಎಂದು ಹೇಳಿದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್ ಮಾತನಾಡಿ, ಯಾವುದೇ ರೀತಿಯ ವ್ಯಸನಕ್ಕೆ ತುತ್ತಾಗುವುದು ಒಳ್ಳೆಯದಲ್ಲ, ವಿದ್ಯಾರ್ಥಿಗಳು ಒಳ್ಳೆಯ ಅವಕಾಶ ವನ್ನು ಸರಿಯಾಗಿ ಬಳಸಿಕೊಂಡು ರಾಷ್ಟç ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಮಾತನಾಡಿ, ಯುವ ಜನರು ಯಾವುದೇ ವ್ಯಸನಕ್ಕೆ ತುತ್ತಾಗಬಾರದು. ವ್ಯಸನಕ್ಕೆ ತುತ್ತಾದಲ್ಲಿ ಅದರಿಂದ ಹೊರಬರುವುದು ಕಷ್ಟಸಾಧ್ಯ ಎಂದರು.

ಮನೋ ವೈದ್ಯರಾದ ಡೆವಿನ್ ಕರ್ಕಡ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಯುವಜನರು ಮದ್ಯ, ಮಾದಕ ವಸ್ತುಗಳಿಗೆ ತುತ್ತಾದರೆ ಭವಿಷ್ಯದಲ್ಲಿ ಖಿನ್ನತೆಗೆ ಒಳಗಾಗ ಬೇಕಾಗುತ್ತದೆ. ಆದ್ದರಿಂದ ಯಾವುದೇ ವ್ಯಸನಗಳಿಗೆ ತುತ್ತಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ ಮಾತನಾಡಿ, ಹದಿಹರೆಯದ ವಿದ್ಯಾರ್ಥಿಗಳು ವ್ಯಸನಕ್ಕೆ ಒಳಗಾಗುತ್ತಾರೆ. ಇದರಿಂದ ಕೆಟ್ಟ ಗುಣಗಳನ್ನು ಅಳವಡಿಸಿಕೊಂಡು ಸಮಾಜದ ಅಧಃಪತನಕ್ಕೆ ಕಾರಣ ರಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದರು.

ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿದರು, ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಉಪನ್ಯಾಸಕರಾದ ರವೀಶ್ ನಿರೂಪಿಸಿದರು, ಚಿದಾನಂದ ವಂದಿಸಿದರು.