ಮಡಿಕೇರಿ, ಆ. ೪: ಕುಂದಾ ಬಸವೇಶ್ವರ ಬಡಾವಣೆ ೧೧೬ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಿಕೊಡಲು ಈಗಾಗಲೇ ಹಕ್ಕುಪತ್ರವನ್ನು ವಿತರಿಸಲಾಗಿದ್ದು, ೩೧ ಫಲಾನುಭವಿಗಳು ಹಲವು ಬಾರಿ ಆಧಾರ್ ಕಾರ್ಡ್ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಲು ಕೋರಿದರೂ ಈವರೆಗೂ ಯಾವುದೇ ದಾಖಲೆಗಳನ್ನು ವೀರಾಜಪೇಟೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಿರುವುದಿಲ್ಲ.

ಮನೆ ನಿರ್ಮಾಣ ಮಾಡಿಕೊಡಲು ತೊಂದರೆಯಾಗಿರುತ್ತದೆ. ಈ ಫಲಾನುಭವಿಗಳು ತಾ. ೨೦ ರೊಳಗೆ ತಮ್ಮ ಆಧಾರ್ ಕಾರ್ಡ್ ಹಾಗೂ ಇತರ ದಾಖಲೆಗಳನ್ನು ತುರ್ತಾಗಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪೊನ್ನಂಪೇಟೆ ಕಚೇರಿಗೆ ಸಲ್ಲಿಸಲು ಕೋರಿದೆ. ತಪ್ಪಿದಲ್ಲಿ ತಮ್ಮ ನಿವೇಶನದ ಹಕ್ಕುಪತ್ರವನ್ನು ರದ್ದುಪಡಿಸಿ ಅರ್ಹ ಹೊಸ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ವೀರಾಜಪೇಟೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗುರುಶಾಂತಪ್ಪ ತಿಳಿಸಿದ್ದಾರೆ.