ಸೋಮವಾರಪೇಟೆ, ಆ. ೪: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಹಾಗೂ ಆರೋಗ್ಯ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಹಾಗೂ ಮಾದಕ ವಸ್ತುಗಳ ನಿರ್ಮೂಲನೆ ಕಾರ್ಯಕ್ರಮ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೋಕುಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ವಕೀಲರಾದ ಹೆಚ್.ಎಸ್. ವೆಂಕಟೇಶ್ ಉಪನ್ಯಾಸ ನೀಡಿದರು.

ಸಂತ ಜೋಸೆಫರ ವಿದ್ಯಾಸಂಸ್ಥೆಯ ಸಂಚಾಲಕರಾದ ಎಂ. ರಾಯಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಪದ್ಮನಾಭ, ವೃತ್ತ ನಿರೀಕ್ಷಕ ಮಹೇಶ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಥೋಮಸ್ ಉಪಸ್ಥಿತರಿದ್ದರು.