ಕುಶಾಲನಗರ, ಆ. ೫: ತಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ವೀಲ್‌ಚೇರ್ ಒದಗಿಸಿಕೊಡುವಂತೆ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕುಶಾಲನಗರ ಸಮೀಪದ ಮುಳ್ಳುಸೋಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಮುಖ್ಯೋಪಾಧ್ಯಾಯರ ಮೂಲಕ ಪತ್ರವೊಂದನ್ನು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ನೀಡಿದ್ದು, ಶಾಲೆಯಲ್ಲಿ ೬ ಮಂದಿ ವಿಶೇಷಚೇತನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಶಾಲೆಗೆ ಬರಲು ವೀಲ್‌ಚೇರ್ ಸೌಲಭ್ಯ ಒದಗಿಸಲು ಸಹಕರಿಸಲು ಮನವಿ ಪತ್ರದಲ್ಲಿ ಕೋರಿದ್ದಾರೆ.

ಈ ಸಂದರ್ಭ ಮಾತನಾಡಿದ ಮುಳ್ಳುಸೋಗೆ ಅಭಿವೃದ್ಧಿ ಅಧಿಕಾರಿ ಸುಮೇಶ್, ಪಂಚಾಯಿತಿ ಮೂಲಕ ಈಗಾಗಲೇ ಒಂದು ವೀಲ್‌ಚೇರ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.