ಮಡಿಕೇರಿ, ಆ. ೪: ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಮತದಾರರ ಎಪಿಕ್ ಸಂಖ್ಯೆಯ ಜೊತೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಕುರಿತು ಮತದಾರರ ನೋಂದಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮತದಾರರ ಕೇಂದ್ರ ತೆರೆಯಲಾಗಿದೆ. ಇಲ್ಲಿ ಮಡಿಕೇರಿ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರು ನಮೂನೆ ೬ಬಿ ಪಡೆದುಕೊಂಡು ತಮ್ಮ ಎಪಿಕ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಜೋಡಿಸಬಹುದು ಎಂದು ಉಪವಿಭಾಗಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಯತೀಶ್ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.