ಶನಿವಾರಸಂತೆ, ಆ. ೫: ಸರಕಾರ ಈ ವರ್ಷ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಚರಿಸದೆ ಸವಿತಾ ಸಮುದಾಯವನ್ನೇ ಕಡೆಗಣಿಸಿದೆ ಎಂದು ಸವಿತಾ ಸಮಾಜದ ಜಿಲ್ಲಾ ಘಟಕದ ಖಜಾಂಚಿ ಎಚ್.ಆರ್. ರಾಮಕೃಷ್ಣ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ಸವಿತಾ ಸಮಾಜ ಸಮಿತಿ ವತಿಯಿಂದ ನಡೆದ ನಿಜಸುಖಿ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಇಲಾಖೆಯಿಂದ ಆಚರಿಸುತ್ತಿಲ್ಲ ಎಂದು ತಿಳಿಸಿದ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಿ ಹಡಪದ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶನಿವಾರಸಂತೆ - ಕೊಡ್ಲಿಪೇಟೆ ಸಮಿತಿ ಅಧ್ಯಕ್ಷ ದಿವಾಕರ್ ಮಾತನಾಡಿ, ಹಡಪದ ಅಪ್ಪಣ್ಣ, ಸವಿತಾ ಮಹರ್ಷಿ, ಸವಿತಾನಂದ ಸ್ವಾಮಿ ಅವರ ಜೀವನದ ಬಗ್ಗೆ ತಿಳಿಸಿದರು.
ಸಮಿತಿ ಗೌರವಾಧ್ಯಕ್ಷ ದಿನೇಶ್ ಬೀಟಿಕಟ್ಟೆ, ಉಪಾಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಕುಮಾರ್, ಸದಸ್ಯರು ಇದ್ದರು.