ಸೋಮವಾರಪೇಟೆ: ಚೌಡ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿಯಾಗಿದ್ದ ಕೆ.ಎಸ್. ಚಂದ್ರಾವತಿ ಅವರು ವಯೋನಿವೃತ್ತರಾದ ಹಿನ್ನೆಲೆ ಶಿಕ್ಷಣ ಇಲಾಖೆ ಮತ್ತು ಚಾವಡಿಮನೆ ಕುಟುಂಬಸ್ಥರ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಸಮೀಪದ ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಕಿಯನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.

ಈ ಸಂದರ್ಭ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ. ರುದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ರಾಜ್ಯ ಸಮಿತಿ ಸಹಕಾರ್ಯದರ್ಶಿ ಚೇತನ್, ತಾಲೂಕು ಘಟಕದ ಅಧ್ಯಕ್ಷ ಬಸವರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ತಾಲೂಕು ಘಟಕದ ಅಧ್ಯಕ್ಷ ಡಿ.ಪಿ. ಧರ್ಮಪ್ಪ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ. ಪರಮೇಶ್, ಚಾವಡಿ ಮನೆ ಹಿರಿಯರಾದ ಟಿ.ಕೆ. ಸುಬ್ಬಯ್ಯ, ಶಿಕ್ಷಕ ಶಿವಕುಮಾರ್ ಸೇರಿದತೆ ಇತರರು ಹಾಜರಿದ್ದರು.*ಗೋಣಿಕೊಪ್ಪ: ತಿತಿಮತಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿ.ಪಿ. ಉತ್ತಪ್ಪ ಅವರನ್ನು ಸಿಬ್ಬಂದಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಿ ಸೇವೆಯನ್ನು ಶ್ಲಾಘಿಸಿದರು.

ತಿತಿಮತಿ ವಲಯದ ಅರಣ್ಯಾಧಿಕಾರಿ ಅಶೋಕ್ ಹುನಗುಂದ, ಪೊನ್ನಂಪೇಟೆ ವಲಯದ ಅರಣ್ಯಾಧಿಕಾರಿ ಬಿ.ಎಂ. ಶಂಕರ್, ತಿತಿಮತಿ ಸರಕಾರಿ ನಾಟಸಂಗ್ರಾಲಯದ ಅರಣ್ಯಾಧಿಕಾರಿ ತೀರ್ಥ ಮತ್ತು ತಿತಿಮತಿ ಉಪವಿಭಾಗದ ವ್ಯಾಪ್ತಿಯ ಕಚೇರಿ ಸಿಬ್ಬಂದಿಗಳು, ಉಪ ವಲಯರಣ್ಯಾಧಿಕಾರಿಗಳು, ಅರಣ್ಯ ರಕ್ಷಕರು, ಅರಣ್ಯವಿಕ್ಷಕರು, ಆರ್.ಆರ್.ಟಿ. ತಂಡದವರು ಉಪಸ್ಥಿತರಿದ್ದರು.ಭಾಗಮಂಡಲ: ಭಾಗಮಂಡಲದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೩೬ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೊಸಗದ್ದೆ ಲಲಿತಾ ಅವರನ್ನು ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್, ಉಪಾಧ್ಯಕ್ಷ ಜೆ.ಎಸ್. ನಂಜುAಡಪ್ಪ, ಆಡಳಿತ ಮಂಡಳಿ ಸದಸ್ಯರು, ಕೆಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಉದಯಕುಮಾರ್, ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಡಿಕೇರಿ ಜಗನ್ನಾಥ್ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.